ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಸಂತ್ರಸ್ತೆ ಸಜೀವ ದಹನಕ್ಕೆ ಯತ್ನ: ವ್ಯಾಪಕ ಆಕ್ರೋಶ

Last Updated 5 ಡಿಸೆಂಬರ್ 2019, 18:53 IST
ಅಕ್ಷರ ಗಾತ್ರ

ಉನ್ನಾವ್‌ (ಉತ್ತರಪ್ರದೇಶ, ಪಿಟಿಐ):‌ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ರಾಯ್‌ಬರೇಲಿ ನ್ಯಾಯಾಲಯಕ್ಕೆ ಬರುತ್ತಿದ್ದ ವೇಳೆ ಐವರು ದುಷ್ಕರ್ಮಿಗಳು ಗುರುವಾರ ಬೆಳಿಗ್ಗೆ ಆಕೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ.

ಸಂತ್ರಸ್ತೆಗೆ ಶೇ 90ರಷ್ಟು ಸುಟ್ಟ ಗಾಯಗಳಾಗಿದ್ದು, ಪರಿಸ್ಥಿತಿ ಗಂಭೀರ ವಾಗಿದೆ. ಲಖನೌದ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸಂಜೆ ಹೊತ್ತಿಗೆ ಏರ್‌ ಆಂಬುಲೆನ್ಸ್‌ ಮೂಲಕ ಕರೆದೊಯ್ದು ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಸಂತ್ರಸ್ತೆ ಯನ್ನು ಅಪಹರಿಸಿ ಅತ್ಯಾಚಾರ ನಡೆಸ ಲಾಗಿತ್ತು. ಶಿವರಾಂ ತ್ರಿವೇದಿ ಮತ್ತು ಶುಭಂ ತ್ರಿವೇದಿ ಎಂಬ ಆರೋಪಿಗಳು ಈ ಕೃತ್ಯ ಎಸಗಿದ್ದರು. ಮಾರ್ಚ್‌ನಲ್ಲಿ ಪ್ರಕರಣ ದಾಖಲಾಗಿತ್ತು.

‘ಈ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹೊರಟಿದ್ದಾಗ ಗೌರಾ ತಿರುವಿನಲ್ಲಿ ಆರೋಪಿಗಳಾದ ಹರಿಶಂಕರ್ ತ್ರಿವೇದಿ, ರಾಮ್‌ಕಿಶೋರ್ ತ್ರಿವೇದಿ, ಉಮೇಶ್ ವಾಜಪೇಯಿ, ಶಿವರಾಂ ತ್ರಿವೇದಿ ಮತ್ತು ಶುಭಂ ತ್ರಿವೇದಿ ನನ್ನ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿಗಳು ನನ್ನ ಕುತ್ತಿಗೆಗೆ ಇರಿದಿದ್ದು, ನಂತರ ಬೆಂಕಿ ಹಚ್ಚಿದ್ದಾರೆ’ ಎಂದು ಸಂತ್ರಸ್ತೆ ಉಪ ವಿಭಾಗದ ಮ್ಯಾಜಿಸ್ಟ್ರೇಟ್ ದಯಾಶಂಕರ್ ಪಾಠಕ್ ಅವರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಕಿ ಹಚ್ಚಿರುವುದರ ಬಗ್ಗೆಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದರು. ನಂತರ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ತೆಗೆ ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಹೇಳಿರುವ ಯೋಗಿ, ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚಿಸಿದ್ದಾರೆ.

ಟೀಕೆ:ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ನಾಯಕರು ಟೀಕೆಗಳ ಸುರಿಮಳೆಗೈದಿದ್ದಾರೆ.

ಇದೇ ಮಾದರಿಯ ಪ್ರಕರಣ ಉತ್ತರ ಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಈಚೆಗೆ ವರದಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂತ್ರಸ್ತೆ ದೆಹಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT