ಶನಿವಾರ, ಫೆಬ್ರವರಿ 22, 2020
19 °C
ಉತ್ತರಪ್ರದೇಶದಲ್ಲಿ ನಡೆದ ಘಟನೆ: ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ದುಷ್ಕರ್ಮಿಗಳು

ಅತ್ಯಾಚಾರಿಗಳಿಂದ ಸಂತ್ರಸ್ತೆ ತಾಯಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಬಾಲಕಿ ಮೇಲೆ ಅತ್ಯಾಚಾರ ಎಸಗಿದವರಿಂದಲೇ ಹಲ್ಲೆಗೊಳಗಾದ ಆಕೆಯ ತಾಯಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಇಲ್ಲಿಗೆ ಸಮೀಪದ ಕಾನ್ಪುರದಲ್ಲಿ ನಡೆದಿದೆ.

2018ರಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಾಬು ಮತ್ತು ಮೆಹ್‌ಫೂಜ್‌ ಎಂಬುವವರನ್ನು ಬಂಧಿಸಲಾಗಿತ್ತು. ಆದರೆ ಸ್ಥಳೀಯ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾದ ಅವರು ಇತರ ಮೂವರ ಜತೆ ಸೇರಿ ಕಳೆದ ಗುರುವಾರ ಬಾಲಕಿಯ ಮನೆಗೆ ನುಗ್ಗಿ, ಪ್ರಕರಣ ಹಿಂಪಡೆಯುವಂತೆ ಬೆದರಿಸಿದ್ದರು.

‘ಇದನ್ನು ನಿರಾಕರಿಸಿದ್ದಕ್ಕಾಗಿ ತಾಯಿ ಮತ್ತು ಸೋದರಿ ಮೇಲೆ ಕೋಲು ಮತ್ತು ಬೂಟಿನಿಂದ ಹಲ್ಲೆ ನಡೆಸಿದ್ದರು. ಗಾಯಗೊಂಡಿದ್ದ ತಾಯಿ  ಆಸ್ಪತ್ರೆಯಲ್ಲಿ  ಸಾವಿಗೀಡಾಗಿದ್ದಾರೆ’ ಎಂದು ‍ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು