ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎ ಅವಧಿಯಲ್ಲಿ 11 ನಿರ್ದಿಷ್ಟ ದಾಳಿ: ಕೆಸಿಆರ್

Last Updated 29 ಮಾರ್ಚ್ 2019, 19:24 IST
ಅಕ್ಷರ ಗಾತ್ರ

ಹೈದರಾಬಾದ್: ಯುಪಿಎ ಸರ್ಕಾರದ ಅವಧಿಯಲ್ಲಿ ಉಗ್ರರ ಶಿಬಿರಗಳ ಮೇಲೆ 11 ಬಾರಿ ನಿರ್ದಿಷ್ಟ ದಾಳಿ ನಡೆಸಲಾಗಿತ್ತು. ಆದರೆ ಅವುಗಳನ್ನು ಬಹಿರಂಗಪಡಿಸಿರಲಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಶುಕ್ರವಾರ ಹೇಳಿದ್ದಾರೆ.ಕೆಸಿಆರ್ ಅವರು ಯುಪಿಎ ಅವಧಿಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾಗಿದ್ದರು.

‘ದೇಶದ ಭದ್ರತೆ ದೃಷ್ಟಿಯಿಂದ ನಿರ್ದಿಷ್ಟ ದಾಳಿಯ ಮಾಹಿತಿಯನ್ನೂ ಬಹಿರಂಗಪಡಿಸಿರಲಿಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭದ್ರತೆಗೆ ಸಂಬಂಧಿಸಿದ ಇಂತಹ ಮಾಹಿತಿಗಳನ್ನು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಪ್ರಚಾರಕ್ಕೆ ಬಳಸಿಕೊಳ್ಳು
ತ್ತಿದೆ’ ಎಂದು ಕೆಸಿಆರ್ ಆರೋಪಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಮೂರು ನಿರ್ದಿಷ್ಟ ದಾಳಿಗಳು ನಡೆದಿದ್ದವು ಎಂದಿದ್ದ ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೆಸಿಆರ್ ಹೇಳಿಕೆ ವ್ಯತಿರಿಕ್ತವಾಗಿದೆ.

ದಾಳಿಯ ಸತ್ಯಾಸತ್ಯತೆ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ಜಗಳ ಮಾಡುತ್ತಿವೆಯೇ ಹೊರತು ಸಾಮಾನ್ಯ ಜನರು ಹಾಗೂ ರೈತರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT