ಕೇಂದ್ರ ಸಚಿವ ಸಂಪುಟಕ್ಕೆ ಕುಶ್ವಾಹ ನೀಡಿದ್ದ ರಾಜೀನಾಮೆ ಅಂಗೀಕಾರ

7

ಕೇಂದ್ರ ಸಚಿವ ಸಂಪುಟಕ್ಕೆ ಕುಶ್ವಾಹ ನೀಡಿದ್ದ ರಾಜೀನಾಮೆ ಅಂಗೀಕಾರ

Published:
Updated:

ನವದೆಹಲಿ: ಆರ್‌ಎಲ್‌ಎಸ್‌ಪಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ಅವರು ಕೇಂದ್ರ ಸಚಿವ ಸಂಪುಟಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳವಾರ ಅಂಗೀಕರಿಸಿದ್ದಾರೆ.

ಪ್ರಧಾನಮಂತ್ರಿ ಅವರ ಸಲಹೆ ಮೇರೆಗೆ ಕುಶ್ವಾಹಾ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಅನ್ವಯವಾಗುವಂತೆ ಅಂಗೀಕರಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕುಶ್ವಾಹ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !