ಮಂಗಳವಾರ, ಫೆಬ್ರವರಿ 18, 2020
29 °C

ಯುಪಿಎಸ್‌ಸಿ: ಮೇನ್‌ ಪರೀಕ್ಷೆ ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

UPSC

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು ಕಳೆದ ಸೆಪ್ಟೆಂಬರ್‌ನಲ್ಲಿ ನಡೆಸಿದ ಐಎಎಸ್‌, ಐಎಫ್‌ಎಸ್‌, ಐಪಿಎಸ್‌ ಮತ್ತು ಇತರ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಮುಖ್ಯ (ಮೇನ್‌) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಸಂದರ್ಶನಕ್ಕೆ ಆಯ್ಕೆ ಆದವರ ಪಟ್ಟಿಯನ್ನು ಪ್ರಕಟಿಸಲಾಗಿದೆ. 

ವೈಯಕ್ತಿಕ ಸಂದರ್ಶನ ಪ್ರಕ್ರಿಯೆಯು ಫೆಬ್ರುವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. 

ಪರಿಶಿಷ್ಟ ಜಾತಿ, ಪಂಗಡ, ಇತರ ಹಿಂದುಳಿದ ವರ್ಗಗಳು, ಅಂಗವಿಕಲರು ಅಥವಾ ಮಾಜಿ ಸೈನಿಕ ವರ್ಗಗಳ ಅಡಿಯಲ್ಲಿ ಮೀಸಲಾತಿ ಅಥವಾ ವಿನಾಯಿತಿ ಬಯಸುವವರು ನಾಗರಿಕ ಸೇವೆ ಪೂರ್ವ ಪರೀಕ್ಷೆಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದ 2019ರ ಮಾರ್ಚ್‌ 19ರ ಮೊದಲು ಪಡೆದ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು. 

ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಅಥವಾ ವಿನಾಯಿತಿ ಬಯಸುವವರು 2019ರ ಆಗಸ್ಟ್‌ 1ಕ್ಕೆ ಮೊದಲು ಪಡೆದ ಆದಾಯ ಮತ್ತು ಆಸ್ತಿ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು