ಮಂಗಳವಾರ, ಮೇ 26, 2020
27 °C

ಯುಪಿಎಸ್‌ಸಿ | ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮೇ 31ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ತಿಳಿಸಿದೆ. ಎರಡನೇ ಹಂತದ ಲಾಕ್‌ಡೌನ್‌ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಗವು ಸೋಮವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.

‘ಹಲವೆಡೆ ನಿರ್ಬಂಧಗಳನ್ನು ಮುಂದುವರಿಸಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಅಥವಾ ಸಂದರ್ಶನ ನಡೆಸಲು ಸಾಧ್ಯವಿಲ್ಲ. ಹೀಗಾಗಿ, ಮೇ 31ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಲಾಗಿದೆ’ ಎಂದು ಯುಪಿಎಸ್‌ಸಿ ಪ್ರಕಟಣೆಯಲ್ಲಿ ಹೇಳಿದೆ.

‘ಪರೀಕ್ಷೆಯ ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ಕನಿಷ್ಠ 30 ದಿನ ಮುಂಚಿತವಾಗಿಯೇ ತಿಳಿಸಲಾಗುವುದು’ ಎಂದು ಆಯೋಗ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು