ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಉರ್ಮಿಳಾ ಕಾಂಗ್ರೆಸ್‌ ಸೇರ್ಪಡೆ

Last Updated 27 ಮಾರ್ಚ್ 2019, 19:46 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ ಬುಧವಾರ ಕಾಂಗ್ರೆಸ್‌ ಸೇರಿದ್ದಾರೆ. ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಇದಕ್ಕೂ ಮೊದಲು ಭೇಟಿ ಮಾಡಿದ್ದರು.

ತಮ್ಮ ಮನೆಯಲ್ಲಿ ನಟಿಯನ್ನು ಪಕ್ಷಕ್ಕೆ ಸ್ವಾಗತಿಸಿದ ರಾಹುಲ್‌ ಗಾಂಧಿ, ಅವರಿಗೆ ಅಭಿನಂದನೆ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ, ‘ನಟಿ ಊರ್ಮಿಳಾ ಅವರು ಕಾಂಗ್ರೆಸ್‌ನ ಸಿದ್ಧಾಂತವನ್ನು ಪ್ರಚುರಪಡಿಸಲು ಹಾಗೂ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸ
ಲಿದ್ದಾರೆ’ ಎಂದು ಹೇಳಿದರು.

‘ಚುನಾವಣೆ ಉದ್ದೇಶದಿಂದ ನಾನು ಕಾಂಗ್ರೆಸ್‌ ಸೇರಿಲ್ಲ. ಬದಲಿಗೆ ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಒಪ್ಪಿ ಸೇರಿದ್ದೇನೆ’ ಎಂದು ಊರ್ಮಿಳಾ ಪ್ರತಿಕ್ರಿಯಿಸಿದರು.

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಊರ್ಮಿಳಾ ಸ್ಪರ್ಧಿಸುವ ಸಾಧ್ಯತೆ ಇದೆ.

‘ಐದು ವರ್ಷಗಳಿಂದ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆಸಾಕಷ್ಟು ದಾಳಿಗಳಾಗಿವೆ. ಇದನ್ನು ವಿರೋಧಿಸಿ ಕಾಂಗ್ರೆಸ್‌ ಹೋರಾಟ ನಡೆಸಿದೆ. ಇದರಿಂದ ಪ್ರಭಾವಿತಳಾಗಿ ಕಾಂಗ್ರೆಸ್‌ ಸೇರಿದ್ದೇನೆ. ಇಂದು ನನ್ನ ಜೀವನದಲ್ಲಿ ಮರೆಯಲಾಗದ ದಿನ. ನಾನು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದೇನೆ. ಬಾಲ್ಯದಿಂದಲೂ ನನ್ನ ಜೀವನದ ಮೇಲೆ ಮಹಾತ್ಮ ಗಾಂಧಿ ಪ್ರಭಾವ ಹೆಚ್ಚಿದೆ’ ಎಂದರು.

ಮುಂಬೈ ಪ್ರದೇಶ ಕಾಂಗ್ರೆಸ್‌ ಸಮಿತಿ ಮುಖ್ಯಸ್ಥ ಮಿಲಿಂದ್ ದೇವ್ರಾ, ಮುಖಂಡ ಸಂಜಯ ನಿರುಪಮ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT