ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಹಂತದ 100 ವೆಂಟಿಲೇಟರ್‌ಗಳನ್ನು‌ ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

Last Updated 16 ಜೂನ್ 2020, 10:19 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕ ರಾಯಭಾರಿ ಕೆನ್ನೆತ್‌ ಜಸ್ಟರ್‌ ಅವರು 100 ವೆಂಟಿಲೇಟರ್‌ಗಳನ್ನು ಭಾರತಕ್ಕೆ ಮಂಗಳವಾರ ಹಸ್ತಾಂತರಿಸಿದರು ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ತಿಳಿಸಿದೆ.

ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಹಾ ಕಾರ್ಯದರ್ಶಿ ಆರ್‌.ಕೆ.ಜೈನ್‌ ಅವರು ವೆಂಟಿಲೇಟರ್‌ಗಳನ್ನು ಸ್ವೀಕರಿಸಿದರು.

ಕೋವಿಡ್‌–19 ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ವೆಂಟಿಲೇಟರ್‌ಗಳನ್ನು ಕೊಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ ತಿಂಗಳಲ್ಲಿ ಘೋಷಿಸಿದ್ದರು. ಅದರ ಭಾಗವಾಗಿ ಮೊದಲ ಹಂತದಲ್ಲಿ 100 ವೆಂಟಿಲೇಟರ್‌ಗಳನ್ನು ಹಸ್ತಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT