ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದ 15 ಜಿಲ್ಲೆಗಳಲ್ಲಿ ಸಂಪೂರ್ಣ ದಿಗ್ಬಂಧನ; ಶೇ 100 ಹೋಂ ಡೆಲಿವರಿ

Last Updated 8 ಏಪ್ರಿಲ್ 2020, 9:43 IST
ಅಕ್ಷರ ಗಾತ್ರ

ಲಖನೌ: ಕೊರೊನಾ ವೈರಸ್‌ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಉತ್ತರ ಪ್ರದೇಶದ ಸರ್ಕಾರ ಲಖನೌ, ನೋಯ್ಡಾ ಸೇರಿದಂತೆ 15 ಜಿಲ್ಲೆಗಳಲ್ಲಿ ಸಂಪೂರ್ಣ ದಿಗ್ಬಂಧನ ವಿಧಿಸಿದೆ.

ಉತ್ತರ ಪ್ರದೇಶದ 15 ಜಿಲ್ಲೆಗಳಲ್ಲಿ ಏಪ್ರಿಲ್‌ 15ರ ವರೆಗೂಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿದ್ದು, ಜನರು ದಿನಸಿ ಹಾಗೂ ತರಕಾರಿ ಖರೀದಿಗೂ ಮನೆಯಿಂದ ಹೊರಬರುವುದನ್ನು ನಿರ್ಬಂಧಿಸಲಾಗಿದೆ.

ಕುಟುಂಬಕ್ಕೆ ಅವಶ್ಯವಿರುವ ಆಹಾರ ಪದಾರ್ಥಗಳು ಸೇರಿದಂತೆ ಅತ್ಯಗತ್ಯ ವಸ್ತುಗಳನ್ನು ಶೇ 100ರಷ್ಟು ಮನೆಯ ಬಾಗಿಲಿಗೇ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

ಲಖನೌ, ಗೌತಮ್‌ ಬುದ್ಧ ನಗರ, ನೋಯ್ಡಾ, ಗಾಜಿಯಾಬಾದ್‌, ಮೀರತ್‌, ಆಗ್ರಾ, ಶಾಮ್ಲಿ ಹಾಗೂ ಸಹರಾಪುರ ಸೇರಿದಂತೆ 15 ಜಿಲ್ಲೆಗಳಲ್ಲಿಸಂಪೂರ್ಣ ದಿಗ್ಭಂಧನ ವಿಧಿಸಲಾಗಿದೆ. ಅಗತ್ಯ ಸಾಮಗ್ರಿಗಳ ಹೋಂ ಡೆಲಿವರಿಗೆ ಹಾಗೂ ವೈದ್ಯಕೀಯ ತಂಡಗಳಿಗೆ ಮಾತ್ರ ಈ ಜಿಲ್ಲೆಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕು ಸಮುದಾಯಗಳಿಗೆ ವ್ಯಾಪಿಸುವುದನ್ನು ನಿಯಂತ್ರಿಸಲು ಈ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಆರ್‌.ಕೆ.ತಿವಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT