ಮಂಗಳವಾರ, ಜನವರಿ 28, 2020
19 °C

ಪಿಎಫ್‌ಐ ನಿಷೇಧ ಕೋರಿ ಕೇಂದ್ರ ಗೃಹ ಇಲಾಖೆಗೆ ಉತ್ತರ ಪ್ರದೇಶ ಸರ್ಕಾರ ಪತ್ರ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಲಖನೌ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಿಷೇಧಿಸಲು ಕೋರಿ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಗೃಹ ಇಲಾಖೆಗೆ ಉತ್ತರ ಪ್ರದೇಶದ ಸರ್ಕಾರದಿಂದ ಪತ್ರ ಬಂದಿದೆ. ಕ್ರಮ ಕೈಗೊಳ್ಳುವುದಕ್ಕೂ ಮುನ್ನ ಗೃಹ ಇಲಾಖೆಗೆಯು ಕಾನೂನು ಸಲಹೆ ಪಡೆಯುವ ಸಾಧ್ಯತೆ ಇದೆ. ಅಲ್ಲದೆ, ಗುಪ್ತಚರ ಮತ್ತು ಸರ್ಕಾರದ ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಲಿದೆ ಎಂದೂ ಮೂಲಗಳು ಹೇಳಿವೆ.

ಉತ್ತರ ಪ್ರದೇಶದ ಡಿಜಿಪಿ ಒ.ಪಿ.ಸಿಂಗ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಸದ್ಯ ಪಿಎಫ್‌ಐನಲ್ಲಿರುವ  ಕೆಲವು ಸಿಮಿ ಸದಸ್ಯರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ. ಈ ಪೈಕಿ ಸುಮಾರು 22 ಮಂದಿಯನ್ನು ಇತ್ತೀಚೆಗೆ ಬಂಧಿಸಲಾಗಿದೆ. ದೆಹಲಿ, ಆಂಧ್ರ ಪ್ರದೇಶ, ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳಲ್ಲಿ ಪಿಎಫ್‌ಐ ಸಕ್ರಿಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು