ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಬಡ ವಲಸೆ ಕಾರ್ಮಿಕರಿಗೆ ಆರ್‌ಎಸ್‌ಎಸ್‌ನಿಂದ ಉಚಿತ ಆಹಾರ ವಿತರಣೆ

Last Updated 26 ಮೇ 2020, 6:34 IST
ಅಕ್ಷರ ಗಾತ್ರ

ಮೊರಾದಾಬಾದ್: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೊಳಗಾಗಿ ಉತ್ತರ ಪ್ರದೇಶಕ್ಕೆ ಮರಳುತ್ತಿರುವ ವಲಸೆ ಕಾರ್ಮಿಕರಿಗೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಆರ್‌ಎಸ್‌ಎಸ್ ಸದಸ್ಯರು ಆಹಾರ ತಯಾರಿಸಿ ಉಚಿತವಾಗಿ ವಿತರಿಸುತ್ತಿದ್ದಾರೆ.

ರೈಲು ನಿಲ್ದಾಣಗಳಲ್ಲಿ ಅಡುಗೆ ಮಾಡಲು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಲಾಗಿದೆ. ರೈಲುಗಳಲ್ಲಿ ಬರುವ ವಲಸೆ ಕಾರ್ಮಿಕರಿಗೆ ಆಹಾರದ ಪೊಟ್ಟಣ ಮತ್ತು ನೀರಿನ ಬಾಟಲ್‌ಗಳನ್ನು ನೀಡಲಾಗುತ್ತಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

‘ಸುಮಾರು 10 ಸಾವಿರ ವಲಸೆ ಕಾರ್ಮಿಕರಿಗೆ ನೀರಿನ ಬಾಟಲ್ ಮತ್ತು ಆಹಾರ ವಿತರಿಸಿದ್ದೇವೆ. ಮೇ 31ರ ವರೆಗೂ ಈ ತಾತ್ಕಾಲಿಕ ಅಡುಗೆಮನೆ ಕಾರ್ಯನಿರ್ವಹಿಸಲಿದೆ. ಪ್ರತಿ ದಿನ 10 ಸಾವಿರದಿಂದ 12 ಸಾವಿರದ ವರೆಗೆ ಬಡ ವಲಸೆ ಕಾರ್ಮಿಕರಿಗೆ ಆಹಾರ ವಿತರಿಸುವುದು ನಮ್ಮ ಗುರಿಯಾಗಿದೆ. 400 ಸ್ವಯಂಸೇವಕರು ಇದಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದು ಆರ್‌ಎಸ್ಎಸ್‌ನ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಜೈನ್ ತಿಳಿಸಿದ್ದಾರೆ.

ಆಹಾರ ತಯಾರಿಸುವ ವೇಳೆ ಅಂತರವನ್ನು ಕಾಯ್ದುಕೊಳ್ಳಲಾಗುತ್ತಿದೆ. ಮಾಸ್ಕ್‌ ಧರಿಸಿ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದೂ ವರದಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT