ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು

Last Updated 1 ಏಪ್ರಿಲ್ 2019, 20:27 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾ ಮತ್ತು ಇವರ ಆಪ್ತ ಮನೋಜ್‌ ಅರೋರಾ ಅವರಿಗೆ ಸಿಬಿಐನ ವಿಶೇಷ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ನೀಡಿದೆ.

₹5 ಲಕ್ಷ ಮೊತ್ತದ ಬಾಂಡ್‌ ಖಾತರಿ ಮೇಲೆ ಇಬ್ಬರಿಗೂ ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರು ಜಾಮೀನು ನೀಡಿದರು. ಇದೇ ವೇಳೆ ಇಬ್ಬರೂ ಅನುಮತಿ ಪಡೆಯದೆ ದೇಶಬಿಟ್ಟು ಹೋಗದಂತೆ ನಿರ್ದೇಶನ ನೀಡಿದರು.

ಸಾಕ್ಷಿಗಳಿಗೆ ಯಾವುದೇ ಹಾನಿ ಮಾಡಬಾರದು ಮತ್ತು ಪ್ರಭಾವ ಬೀರಬಾರದು ಎಂದೂ ನ್ಯಾಯಾಲಯ ತಿಳಿಸಿದೆ.

ಲಂಡನ್‌ನಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವನ್ನು ವಾದ್ರಾ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT