ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಯಡಿ ತಯಾರಾದ ಭಾರತದ ಮೊದಲ ಸೆಮಿಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆಗೊಂಡ ಮರುದಿನವೇ ಕೈಕೊಟ್ಟಿದೆ.
ದೆಹಲಿ–ವಾರಾಣಸಿ ನಡುವೆ ಸಂಚರಿಸುವ ಈ ರೈಲು ಗಂಟೆಗೆ 160 ಕಿ.ಮೀ ವೇಗದಲ್ಲಿ ಓಡುತ್ತಿದೆ. ಭಾರತದ ಅತ್ಯಂತ ವೇಗದ `ಟ್ರೈನ್ 18' ರೈಲನ್ನು ವಂದೇ ಭಾರತ್ ಎಕ್ಸ್‌ಪ್ರೆಸ್ ಎಂದು ಹೆಸರು ಬದಲಾಯಿಸಲಾಗಿತ್ತು.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು.
ಶನಿವಾರ ಬೆಳಗ್ಗೆ ವಾರಾಣಸಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಹಸುವಿಗೆ ಡಿಕ್ಕಿ ಹೊಡೆದುರೈಲಿನ ಬ್ರೇಕ್ ಡೌನ್ ಆಗಿತ್ತು.ಉತ್ತರ ಪ್ರದೇಶದ ತುಂಡ್ಲಾ ಎಂಬಲ್ಲಿಂದ 15 ಕಿ.ಮೀ ದೂರಲಿರುವ ಬಹರೈನ್ ಎಂಬಲ್ಲಿ ಶನಿವಾರ ಬೆಳಗ್ಗೆ 5.30ಕ್ಕೆ ರೈಲಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ರೈಲಿನಲ್ಲಿ ಕಂಡು ಬಂದ ತಾಂತ್ರಿಕ ದೋಷವನ್ನು ಸರಿಪಡಿಸಿದ ನಂತರ ಬೆಳಗ್ಗೆ 8.15ಕ್ಕೆ ರೈಲು ಹೊರಟಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ:‘ವಂದೇ ಭಾರತ್’ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದ ಮೋದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.