ನವದೆಹಲಿ: ‘ಸಿಂಗಾಪುರದಿಂದ ಏರ್ ಇಂಡಿಯಾ ವಿಮಾನಶುಕ್ರವಾರ ಬೆಳಿಗ್ಗೆ 234 ಮಂದಿ ಭಾರತೀಯರೊಂದಿಗೆದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ’ ಎಂದು ವಿಮಾನಯಾನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲು ಗುರುವಾರ ವಂದೇ ಭಾರತ್ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು.
‘234 ಮಂದಿ ಭಾರತೀಯರನ್ನು ಕರೆತಂದ ಏರ್ ಇಂಡಿಯಾ ಬಿ–787 ವಿಮಾನ ಬೆಳಿಗ್ಗೆ 11.45ರ ಸುಮಾರಿಗೆ ದೆಹಲಿ ವಿಮಾಣ ನಿಲ್ದಾಣಕ್ಕೆ ಬಂದಿಳಿದಿದೆ’ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.