ಮುಂಬೈ: ಬ್ರಿಟನ್‌ನಲ್ಲಿರುವ 326 ಭಾರತೀಯರನ್ನು ಒಳಗೊಂಡ ಏರ್ ಇಂಡಿಯಾ ವಿಮಾನವು ಭಾನುವಾರ ಬೆಳಿಗ್ಗೆ ಮುಂಬೈ ತಲುಪಿದೆ.
326 ಮಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನವು ಶನಿವಾರ ಲಂಡನ್‌ನಿಂದ ಪ್ರಯಾಣ ಬೆಳೆಸಿ ಭಾನವಾರ ಬೆಳಿಗ್ಗೆ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ ಎಂದು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತಿಳಿಸಿದೆ.
ಮೇ 7ರಿಂದ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಂತಹಂತವಾಗಿ ಕರೆತರಲಾಗುವುದು ಎಂದು ಕೇಂದ್ರ ಸರ್ಕಾರ ಕಳೆದ ಸೋಮವಾರ ಹೇಳಿತ್ತು. ಮೇ 7ರಿಂದ 13ರ ವರೆಗೆ 15 ಸಾವಿರ ಮಂದಿಯನ್ನು ಕರೆತರಲು ಏರ್ ಇಂಡಿಯಾದ 64 ವಿಮಾನಗಳು ಕಾರ್ಯಾಚರಣೆ ನಡೆಸಲಿವೆ ಎಂದೂ ಸರ್ಕಾರ ಹೇಳಿತ್ತು.
‘ವಂದೇ ಭಾರತ್ ಮಿಷನ್’ನ ಮೂರನೇ ದಿನ ಗಲ್ಫ್ ರಾಷ್ಟ್ರಗಳು, ಬ್ರಿಟನ್, ಬಾಂಗ್ಲಾದೇಶ ಹಾಗೂ ಮಲೇಷ್ಯಾದಿಂದ ವಿಮಾನಗಳು ಭಾರತ ತಲುಪಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.