ಸೋಮವಾರ, ಜೂಲೈ 6, 2020
23 °C

ವಂದೇ ಭಾರತ್‌ ಮಿಷನ್‌: ಮೂರು ದೇಶಗಳಿಂದ 800ಕ್ಕೂ ಹೆಚ್ಚು ಭಾರತೀಯ ನಾಗರಿಕರ ಆಗಮನ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ವಂದೇ ಭಾರತ್ ಮಿಷನ್ ಅಡಿಯಲ್ಲಿ, 800ಕ್ಕೂ ಹೆಚ್ಚು ಭಾರತೀಯ ನಾಗರಿಕರನ್ನು ದೋಹಾ, ಸ್ಯಾನ್ ಫ್ರಾನ್ಸಿಸ್ಕೊ, ಮೆಲ್ಬೋರ್ನ್ ಮತ್ತು ಸಿಡ್ನಿಯಿಂದ ಸೋಮವಾರ ಕರೆತರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್ ಪುರಿ ತಿಳಿಸಿದ್ದಾರೆ.

'833 ಭಾರತೀಯ ನಾಗರಿಕರು 2020ರ ಮೇ 25 ರಂದು ದೋಹಾ, ಸ್ಯಾನ್ ಫ್ರಾನ್ಸಿಸ್ಕೊ, ಮೆಲ್ಬೋರ್ನ್ ಮತ್ತು ಸಿಡ್ನಿಯಿಂದ ದೆಹಲಿ, ಗಯಾ, ಕೊಚ್ಚಿನ್‌ ಮತ್ತು ಅಹಮದಾಬಾದ್‌ಗೆ ನಾಲ್ಕು ವಿಮಾನಗಳಲ್ಲಿ ಮರಳಿದ್ದಾರೆ' ಎಂದು ಪುರಿ ಸೋಮವಾರ ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್‌ಡೌನ್‌ನಿಂದಾಗಿ ವಿದೇಶದಲ್ಲಿ ಉಳಿದಿದ್ದ ಭಾರತೀಯರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ವಂದೇ ಭಾರತ್ ಮಿಷನ್‌ನ ಮೊದಲ ಹಂತವನ್ನು ಮೇ 7 ರಂದು ಪ್ರಾರಂಭಿಸಿತು. 

ವಂದೇ ಭಾರತ್‌ ಮಿಷಿನ್‌ ಅಡಿಯಲ್ಲಿ ಈವರೆಗೆ 20 ಸಾವಿರ ಭಾರತೀಯ ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕಳೆದ ವಾರ ಪುರಿ ತಿಳಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು