‘ವಂದೇಮಾತರಂಗೂ ರಾಷ್ಟ್ರಗೀತೆ ಸ್ಥಾನಮಾನ ಕೊಡಿ’
ನವದೆಹಲಿ : ರಾಷ್ಟ್ರಗೀತೆ ಮತ್ತು ವಂದೇಮಾತರಂ ಅನ್ನು ಏಕ ರೀತಿಯಲ್ಲಿ ಪ್ರಚಾರ ಮಾಡಲು ನೀತಿಯೊಂದನ್ನು ರೂಪಿಸಬೇಕು ಎಂದು ಸೋಮವಾರ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಬಂಕಿಮ್ಚಂದ್ರ ಚಟರ್ಜಿ ಅವರು ಬರೆದ ವಂದೇಮಾತರಂ ಹಾಡಿಗೆ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ರಾಷ್ಟ್ರಗೀತೆ ‘ಜನಗಣಮನ’ಕ್ಕೆ ನೀಡುವ ಗೌರವವನ್ನೇ ಕೊಡಬೇಕು ಎಂದು ಬಿಜೆಪಿ ಮುಖಂಡ ಮತ್ತು ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಎರಡೂ ಗೀತೆಗಳನ್ನು ಪ್ರತಿದಿನ ಶಾಲೆಗಳಲ್ಲಿ ಹಾಡುವಂತೆ ನಿರ್ದೇಶನ ನೀಡಬೇಕು ಎಂದೂ ಅವರು ಆಗ್ರಹಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.