ಶನಿವಾರ, ಆಗಸ್ಟ್ 15, 2020
26 °C

ಮೋದಿ ಸ್ವಾಗತಕ್ಕೆ ಸಕಲ ಸಿದ್ಧಗೊಂಡ ವಾರಾಣಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉತ್ತರಪ್ರದೇಶ: ಲೋಕಸಭಾ ಫಲಿತಾಂಶ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ವಾರಾಣಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭೇಟಿ ನೀಡಲಿದ್ದು, ಪ್ರಧಾನಿ ಸ್ವಾಗತಕ್ಕೆ ಇಡೀ ನಗರ ಸಜ್ಜುಗೊಂಡಿದೆ.

ನಗರದೆಲ್ಲೆಡೆ ಬಣ್ಣ ಬಣ್ಣದ ಬಲೂನ್‌‌ಗಳನ್ನು ಕಟ್ಟಲಾಗಿದ್ದು, ಪ್ರಧಾನಿ ಮೋದಿಯವರ ಭಾವಚಿತ್ರ ಎಲ್ಲೆಡೆಯೂ ರಾರಾಜಿಸುತ್ತಿವೆ. ಭಾರಿ ಪ್ರಮಾಣದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಚುನಾವಣಾ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಭಾರೀ ಪ್ರಮಾಣದಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಫಲಿತಾಂಶದ ನಂತರ ಪ್ರಥಮ ಬಾರಿಗೆ ಭೇಟಿ ನೀಡಲಿರುವ ಪ್ರಧಾನಿ ಗಂಗೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಪೊಲೀಸರು ಎಲ್ಲೆಡೆ ಬಿಗಿ ಭದ್ರತೆ ಕೈಗೊಂಡಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಇಡೀ ನಗರವನ್ನು ತೀವ್ರ ತಪಾಸಣೆ ನಡೆಸಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶೇಷ ಕಾಳಜಿ ವಹಿಸಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು