ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಎಂಕೆ ಹಿರಿಯ ನಾಯಕ ಕೆ. ಅನ್ಬಗಳನ್ ನಿಧನ

Last Updated 7 ಮಾರ್ಚ್ 2020, 14:06 IST
ಅಕ್ಷರ ಗಾತ್ರ

ಚೆನ್ನೈ: ಡಿಎಂಕೆ ಹಿರಿಯ ನಾಯಕ ಕೆ. ಅನ್ಬಗಳನ್ (97) ಅವರು ವಯೋಸಹಜ ಅನಾರೋಗ್ಯದಿಂದ ಶನಿವಾರನಿಧನರಾದರು.

‘ಫೆ.24ರಂದು ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ನಿಧನ ಹಿನ್ನೆಲೆ ಒಂದು ವಾರ ಅವಧಿಗೆ ಪಕ್ಷದ ಬಾವುಟವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ. ಪಕ್ಷದ ಸಂಸ್ಥಾಪಕರಾಗಿದ್ದ ದಿವಂಗತ ಕರುಣಾನಿಧಿ ಅವರಿಗೆ ಅನ್ಬಗಳನ್ ಅವರು ಆಪ್ತಸ್ನೇಹಿತರಾಗಿದ್ದರು’ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಹೇಳಿದರು.

ಅನ್ಬಗಳನ್ ನಿಧನಕ್ಕೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT