ಶುಕ್ರವಾರ, ಫೆಬ್ರವರಿ 28, 2020
19 °C

ಆರ್‌ಎಸ್‌ಎಸ್‌ ಪ್ರಚಾರಕ ಪರಮೇಶ್ವರನ್‌ ಇನ್ನಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ:  ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಹಿರಿಯ ಪ್ರಚಾರಕ ಪಿ.ಪರಮೇಶ್ವರನ್‌ (93) ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. 

ಆಲಪ್ಪುಳ ಜಿಲ್ಲೆಯ ಮುಹಮ್ಮಾದಲ್ಲಿ ಜನಿಸಿದ ಇವರು, ಕಾಲೇಜು ದಿನಗಳಲ್ಲಿಯೇ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದರು. 

ಭಾರತೀಯ ವಿಚಾರ ಕೇಂದ್ರದ ಸಂಸ್ಥಾಪಕ ನಿರ್ದೇಶಕರಾಗಿದ್ದ ಇವರು, ವಯೋಸಹಜ ಕಾಯಿಲೆಗೆ ತುತ್ತಾಗಿದ್ದರು. ಪಾಲಕ್ಕಾಡಿನ ಒಟ್ಟಪಾಲಂನಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು.  

2004ರಲ್ಲಿ ಪದ್ಮಶ್ರೀ, 2018ರಲ್ಲಿ ಪದ್ಮವಿಭೂಷಣ ಪುರಸ್ಕಾರಕ್ಕೆ ಇವರು ಭಾಜನರಾಗಿದ್ದರು. ಪರಮೇಶ್ವರನ್‌ ಅವರು 1967-71ರ ತನಕ ಭಾರತೀಯ ಜನಸಂಘದ ಕಾರ್ಯದರ್ಶಿ, 1971-77ರ ವರೆಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1977-82ರವರೆಗೆ ದೀನದಯಾಳ್‌ ಉಪಾಧ್ಯಾಯ ರಿಸರ್ಚ್ ಇನ್‌ಸ್ಟಿಟ್ಯೂಟ್‌ ನಿರ್ದೇಶಕರಾಗಿ ದೆಹಲಿಯಲ್ಲಿ ಕೆಲಸ ಮಾಡಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ 16 ತಿಂಗಳು ಸೆರೆವಾಸ ಅನುಭವಿಸಿದ್ದರು. 

ಪರಮೇಶ್ವರನ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಭಾರತ ಮಾತೆಗೆ ಮುಡಿಪಾಗಿದ್ದ ಹೆಮ್ಮೆಯ ಪುತ್ರ’ ಎಂದು ಬಣ್ಣಿಸಿ ಟ್ವೀಟ್‌ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು