ಗುರುವಾರ , ಜೂನ್ 24, 2021
27 °C

ರಾಜಕೀಯಕ್ಕೆ ಸೇನೆ ಬಳಸಲು ಬಿಡಬೇಡಿ: ಇನ್ನೂ 200 ಸೇನಾಧಿಕಾರಿಗಳ ಸಹಿ

ಕಲ್ಯಾಣ್‌ ರೇ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಕೀಯ ಪಕ್ಷಗಳು ಚುನಾವಣಾ ಉದ್ದೇಶಕ್ಕೆ ಸೇನೆಯನ್ನು ಬಳಸಿಕೊಳ್ಳುದಂತೆ ನಿರ್ದೇಶನ ನೀಡಿ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ನಿವೃತ್ತ ಸೇನಾಧಿಕಾರಿಗಳು ಬರೆದಿದ್ದ ಪತ್ರಕ್ಕೆ ಇನ್ನೂ 200 ನಿವೃತ್ತ ಸೇನಾಧಿಕಾರಿಗಳು ತಮ್ಮ ಸಹಿ ಸೇರಿಸಿದ್ದಾರೆ.

ಭಾರತದ ಸೇನೆಯ ಮೂರೂ ಪಡೆಗಳ ಮಹಾದಂಡನಾಯಕರಾಗಿರುವ ರಾಷ್ಟ್ರಪತಿಗೆ ತಿಂಗಳ ಹಿಂದೆ 156 ನಿವೃತ್ತ ಸೇನಾಧಿಕಾರಿಗಳು ಪತ್ರ ಬರೆದಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೇನೆಯನ್ನು ‘ಮೋದಿ ಅವರ ಸೇನೆ’ ಎಂದು ಕರೆದಿದ್ದರು. ಬಾಲಾಕೋಟ್ ವಾಯುದಾಳಿಯ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ ಕೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಈ ವಿಚಾರಗಳನ್ನು ಪದೇ ಪದೇ ಪ್ರಸ್ತಾಪಿಸಿದ್ದಾರೆ. ಇದರಿಂದ ಸೇನೆಗೆ ಧಕ್ಕೆಯಾಗುತ್ತದೆ. ಹೀಗಾಗಿ ರಾಜಕೀಯ ಉದ್ದೇಶಕ್ಕೆ ಸೇನೆಯ ವಿಚಾರಗಳನ್ನು ಬಳಸಿಕೊಳ್ಳದಂತೆ ನಿರ್ದೇಶನ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.

ಅಂತಹ ಯಾವುದೇ ಪತ್ರ ನಮಗೆ ಬಂದಿಲ್ಲ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ತಿಳಿಸಿದ್ದರು. ಆದರೆ ಇ–ಮೇಲ್ ಮೂಲಕ ಪತ್ರ ಬಂದಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿರಲಿಲ್ಲ. ಇದು ವಿವಾದಕ್ಕೆ ಕಾರಣವಾಗಿತ್ತು.

ಪತ್ರದಲ್ಲಿ ಹೆಸರಿಸಲಾಗಿರುವ ಹಲವು ನಿವೃತ್ತ ಸೇನಾಧಿಕಾರಿಗಳು ತಾವು ಸಹಿ ಮಾಡಿಯೇ ಇಲ್ಲ ಎಂದು ಹೇಳಿದ್ದರು. ಆದರೆ ನಂತರ ಸಹಿ ಮಾಡಿದ್ದಾಗಿ ಒಪ್ಪಿಕೊಂಡಿದ್ದರು. ಈಗ ಇನ್ನೂ 200 ಸೇನಾಧಿಕಾರಿಗಳು ಸಹಿ ಮಾಡಿರುವುದರಿಂದ ಪತ್ರಕ್ಕೆ ಇನ್ನಷ್ಟು ಮಹತ್ವ ಬಂದಿದೆ.

ಈ ಪತ್ರವನ್ನು ಆಧರಿಸಿಯೇ ವಿರೋಧ ಪಕ್ಷಗಳು ಮೋದಿ, ಶಾ ಮತ್ತು ಯೋಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಅದರೆ ಆಯೋಗವು ಯೋಗಿ ವಿರುದ್ಧ ಮಾತ್ರ ಕ್ರಮ ತೆಗೆದುಕೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು