ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ | ಪ್ರತ್ಯೇಕ ವಾರ್ಡ್‌ನಲ್ಲಿ ಮೃತದೇಹ: ತನಿಖೆಗೆ ಕೇಂದ್ರ ಸಚಿವ ಆಗ್ರಹ

Last Updated 22 ಏಪ್ರಿಲ್ 2020, 13:39 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯೊಂದರ ಪ್ರತ್ಯೇಕ ವಾರ್ಡ್‌ನಲ್ಲಿ ಮೃತರೋಗಿಯೊಬ್ಬನ ದೇಹ ಇರುವ ವಿಡಿಯೊವನ್ನು ಕೇಂದ್ರ ಸಚಿವ ಬಾಬುಲ್‌ ಸುಪ್ರಿಯೊ ಅವರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಇದರ ನೈಜತೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಪ್ರಶ್ನಿಸಿದೆ.

ʼವಿರೋಧ ಪಕ್ಷ ಬಿಜೆಪಿ ಸುಳ್ಳುಸುದ್ದಿಗಳನ್ನು ಹರಡುವುದರಲ್ಲಿ ʼನೈಪುಣ್ಯತೆʼ ಹೊಂದಿದೆʼ ಎಂದು ರಾಜ್ಯ ಸರ್ಕಾರ ಹೇಳಿದೆ.

ʼಇದು ಆಘಾತಕಾರಿ ವಿಡಿಯೊ. ಸಾರ್ವಜನಿಕವಾಗಿ ಲಭ್ಯವಿರುವ ಈ ವಿಡಿಯೊ ಕುರಿತು ತ್ವರಿತವಾಗಿ ತನಿಖೆ ನಡೆಸಿ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡುತ್ತೇನೆʼ ಎಂದು ಸುಪ್ರಿಯೊ ಹೇಳಿದ್ದಾರೆ.

ʼಮೊದಲು ವಿಡಿಯೊದ ನೈಜತೆ ಪರಿಶೀಲಿಸಬೇಕು. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆʼ ಎಂದು ಪಶ್ಚಿಮ ಬಂಗಾಳದ ಹಿರಿಯ ಸಚಿವ ಪಾರ್ಥ ಚಟರ್ಜಿ ತಿಳಿಸಿದ್ದಾರೆ.

ಈ ಕುರಿತು ಮತ್ತೊಂದು ಟ್ವೀಟ್‌ ಮಾಡಿರುವ ಸುಪ್ರಿಯೊ ಅವರು ʼರಾಜ್ಯ ಸರ್ಕಾರ ಇನ್ನೂ ಸಹ ವಿಡಿಯೊ ನಕಲಿ ಎಂದು ಹೇಳದೆ ಇರುವುದರಿಂದ ಇದು ನಿಜವಾದದ್ದು ಎಂದು ನಂಬುವಂತಾಗಿದೆ. ವಿಡಿಯೊ ವೈರಲ್‌ ಆದ ನಂತರ ಆಸ್ಪತ್ರೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎನ್ನುವ ವದಂತಿ ಕೇಳಿಬರುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಬೇಕುʼ ಎಂದು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT