ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ್ ಮಲ್ಯ ‘ದೇಶಭ್ರಷ್ಟ ಆರ್ಥಿಕ ಅಪರಾಧಿ’: ಆಸ್ತಿ ಮುಟ್ಟುಗೋಲು ಇನ್ನು ಸುಲಭ

ಅಕ್ರಮ ಹಣ ವರ್ಗಾವಣೆ ತಡೆ ನ್ಯಾಯಾಲಯ ಘೋಷಣೆ
Last Updated 5 ಜನವರಿ 2019, 11:10 IST
ಅಕ್ಷರ ಗಾತ್ರ

ಮುಂಬೈ:ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯರನ್ನು ಇಲ್ಲಿನ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‌ಎ) ನ್ಯಾಯಾಲಯ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಘೋಷಿಸಿದೆ.

ಇದರೊಂದಿಗೆ, ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ ಜಾರಿಗೊಂಡ ಬಳಿಕ ಹಾಗೆ ಘೋಷಿಸಲಾದ ಮೊದಲ ಉದ್ಯಮಿಯಾಗಿದ್ದಾರೆ ಮಲ್ಯ. ಕಳೆದ ವರ್ಷದ ಆಗಸ್ಟ್‌ನಲ್ಲಿ ಕಾಯ್ದೆ ಜಾರಿಗೆ ಬಂದಿತ್ತು.

ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿರುವುದರಿಂದ ಪ್ರಕರಣದ ತನಿಖೆ ನಡೆಸುತ್ತಿರುವ ಸಂಸ್ಥೆಗೆ ಮಲ್ಯ ಆಸ್ತಿ, ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ದೊರೆತಿದೆ.ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) 2018ರ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.

ಇನ್ನಷ್ಟು ಸುದ್ದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT