ಕೋಲ್ಕತ್ತ: ಎರಡು ಬಾರಿ ಪ್ರಶಸ್ತಿ ಗೆದ್ದಿರುವ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಒಂದು ಸಲ ಚಾಂಪಿಯನ್ ಆಗಿರುವ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಶುಕ್ರವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಿವೆ.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸನ್ರೈಸರ್ಸ್ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.