ಮಂಗಳವಾರ, ಜೂನ್ 2, 2020
27 °C
ಕುತೂಹಲಕರ ಘಟ್ಟಕ್ಕೆ ಮಧ್ಯಪ್ರದೇಶ ವಿದ್ಯಮಾನ

ಮಧ್ಯಪ್ರದೇಶ ವಿಶ್ವಾಸಮತ: ಇಂದು ಸ್ಪೀಕರ್‌ ನಿರ್ಧಾರ?

ಪಿಟಿಐ Updated:

ಅಕ್ಷರ ಗಾತ್ರ : | |

ಭೋಪಾಲ್‌: ಮಾರ್ಚ್‌ 16ರ ಸೋಮವಾರ ಮಧ್ಯಪ್ರದೇಶ ವಿಧಾನಸಭೆಯ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಂದೇ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಕಮಲ್‌ನಾಥ್‌ಗೆ ರಾಜ್ಯಪಾಲ ಲಾಲ್‌ಜಿ ಟಂಡನ್‌ ಸೂಚಿಸಿದ್ದಾರೆ.

ಇನ್ನೊಂದೆಡೆ, ‘ಈ ಸಂಬಂಧ ಸೋಮವಾರವೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ’ ಎಂದು ಸಭಾಧ್ಯಕ್ಷ ಎನ್‌.ಪಿ.ಪ್ರಜಾಪತಿ ಭಾನುವಾರ ಹೇಳಿದ್ದಾರೆ. ಹೀಗಾಗಿ ಕಮಲ್‌ನಾಥ್‌ ನೇತೃತ್ವದ ಸರ್ಕಾರದ ಅಳಿವು–ಉಳಿವು ಈಗ ಕುತೂಹಲಕರ ಘಟ್ಟ ತಲುಪಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತಿದ್ದಂತೆಯೇ ಅವರಿಗೆ ನಿಷ್ಠರಾದ 22 ಶಾಸಕರೂ ಪಕ್ಷವನ್ನು ತೊರೆದರು. ಈ ಪೈಕಿ ಆರು  ಶಾಸಕರ ರಾಜೀನಾಮೆಯನ್ನು ಸಭಾಧ್ಯಕ್ಷ ಪ್ರಜಾಪತಿ ಅಂಗೀಕರಿಸಿದ್ದಾರೆ. ಆದ್ದರಿಂದ ವಿಧಾನಸಭೆಯ ಈಗಿನ ಸಂಖ್ಯಾಬಲ 222ಕ್ಕೆ ಕುಸಿದಿದೆ. ಹೀಗಾಗಿ ಸರಳ ಬಹುಮತಕ್ಕೆ ಅಗತ್ಯವಿರುವ ಶಾಸಕರ ಸಂಖ್ಯೆ 112.

ಕಾಂಗ್ರೆಸ್‌ ಶಾಸಕರ ಸಂಖ್ಯೆ 108 ಇದ್ದು, ಮೈತ್ರಿ ಪಕ್ಷಗಳ 7 ಶಾಸಕರ ಬೆಂಬಲದೊಂದಿಗೆ ಸರಳ ಬಹುಮತ ಹೊಂದಿದೆ. ಬಿಜೆಪಿ ಸದಸ್ಯರ ಸಂಖ್ಯೆ 107 ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು