ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Last Updated 22 ಮೇ 2018, 7:49 IST
ಅಕ್ಷರ ಗಾತ್ರ

ಶಿರಸಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿಲ್ಲ ಎಂದು ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಉಂಚಳ್ಳಿಯ ಸುರೇಶ ಪೂಜಾರಿ (33) ಸೋಮವಾರ ತಡರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಅವರನ್ನು ಶಿರಸಿ ಸ್ಕ್ಯಾನ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರೇಶ ಅನೇಕ ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ.

ಸುರೇಶ ಪೂಜಾರಿ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದು, ಕಳೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ವಿಧಾನಸಭಾ ಚುನಾವಣೆಯ ವೇಳೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಂಚಳ್ಳಿ ಸುತ್ತಮುತ್ತಲ ಊರುಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದರು.

'ಸುರೇಶ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ' ಎಂದು ವೈದ್ಯರು ತಿಳಿಸಿದ್ದಾರೆ. ಯಲ್ಲಾಪುರ ಕ್ಷೇತ್ರದ ಪರಾಜಿತ ಅಭ್ಯರ್ಥಿ ವಿ.ಎಸ್.ಪಾಟೀಲ (ಬಿಜೆಪಿ), ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಸ್ಪತ್ರೆಗೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT