ಗುರುವಾರ , ಡಿಸೆಂಬರ್ 12, 2019
17 °C

ಕೊಯಂಬತ್ತೂರಿನಲ್ಲಿ ಆವರಣ ಗೋಡೆ ಕುಸಿದು 17 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸೋಮವಾರ ಗೋಡೆ ಕುಸಿದು ಸಂಭವಿಸಿದ  ದುರಂತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ.  ಅವಶೇಷಗಳಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದೆ.

ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಮೇಟ್ಟುಪಾಲಯಂಮ ನಾಡೂರ್ ಎಂಬಲ್ಲಿ ನಾಲ್ಕು ಮನೆಗಳ ಮೇಲೆ ಆವರಣ ಗೋಡೆ ಕುಸಿದು ಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ 5 ಮಂದಿ ಸಾವಿಗೀಡಾಗಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಮಳೆ ಮತ್ತಷ್ಟು ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ:  ತಮಿಳುನಾಡಿನಲ್ಲಿ ಭಾರೀ ಮಳೆ: 5 ಸಾವು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು