ಮಂಗಳವಾರ, ಮಾರ್ಚ್ 2, 2021
31 °C

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಷಡ್ಯಂತ್ರ: ಚುನಾವಣಾ ಆಯೋಗಕ್ಕೆ ದೂರು

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸಿಬಿಐ ಮತ್ತು ಮಮತಾ ಬ್ಯಾನರ್ಜಿ ನಡುವಿನ ಜಟಾಪಟಿ ತಾರಕಕ್ಕೇರಿರುವ ಸಂದರ್ಭದಲ್ಲಿಯೇ, ಇತ್ತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ನಿಯೋಗವೊಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಅಲ್ಲಿ ನಡೆಯುತ್ತಿರುವ ಬಿಜೆಪಿ ವಿರೋಧಿ ಘಟನೆಗಳ ಬಗ್ಗೆ ದೂರು ನೀಡಿದೆ.

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಂಗಾಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಿರ್ಮಲಾ ಸೀತಾರಾಮನ್‌, ಮುಖ್ತರ್‌ ಅಬ್ಬಾಸ್‌ ನಖ್ವಿ, ಭೂಪೇಂದ್ರ ಯಾದವ್‌ ಅವರನ್ನು ಒಳಗೊಂಡ ನಿಯೋಗ ಚುನಾವಣಾ ಆಯೋಗದ ಗಮನಕ್ಕೆ ತಂದಿದೆ.

‘ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳದಲ್ಲಿ ಮುಕ್ತ ಹಾಗೂ ನ್ಯಾಯಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದ, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಬೆಂಬಲದಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಟಿಎಂಸಿ ಪಕ್ಷ ಮಾಡುತ್ತಿದೆ ಎನ್ನುವುದು ಸೇರಿ ಅನೇಕ ವಿಷಯಗಳ ಚರ್ಚಿಸಿದ್ದೇವೆ’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಿಧ ಕಾರಣಗಳನ್ನು ನೀಡಿ ಬಿಜೆಪಿ ಸಭೆಗಳಿಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇತ್ತೀಚೆಗಷ್ಟೆ ಉತ್ತರ ದಿನ್‌ಜ್ಪುರದಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಸಮಾವೇಶಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭಾಗವಹಿಸದಂತೆ ನಿರ್ಬಂಧ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು