ಮಂಗಳವಾರ, ಡಿಸೆಂಬರ್ 10, 2019
19 °C

ಶಿವಸೇನೆಗೆ ವಿರೋಧ ಪಕ್ಷದ ಸ್ಥಾನ ಗ್ಯಾರಂಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಶಿವಸೇನೆಗೆ ವಿರೋಧ ಪಕ್ಷದ ಸ್ಥಾನಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಶಿವಸೇನೆ ಎನ್ ಡಿಎ ಸಭೆಗೆ ಬಂದಿಲ್ಲ. ಅವರು ಕಾಂಗ್ರೆಸ್ ಜೊತೆ ಕೆಲಸ ಮಾಡಲು ಯತ್ನಿಸುತ್ತಿದ್ದಾರೆ. ಸ್ವಾಭಾವಿಕವಾಗಿ ಅವರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಎಲ್ಲಾ ವ್ಯವಸ್ಥೆಗಳನ್ನೂ ಮಾಡಲಾಗಿದೆ. ನಾವೂ ಅದನ್ನೂ ಒಪ್ಪಿದ್ದೇವೆ. ಈಗಾಗಲೇ ಲೋಕಸಭೆ ಹಾಗೂ ರಾಜ್ಯ ಸಭೆಗಳಲ್ಲಿ ವಿರೋಧ ಪಕ್ಷಗಳಿಗೆ ಇರುವ ಜಾಗದಲ್ಲಿ ಸ್ಥಾನಗಳನ್ನು ಆಯ್ಕೆ ಮಾಡಲಾಗಿದೆ ಎಂದಿದ್ದಾರೆ ಎಂದು ಎಎನ್ಐ ಸುದ್ದಿ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕಾರಣ | ಶಿವಸೇನೆಯ ಅಧಿಕಾರ ಹಂಚಿಕೆ ಆರೋಪಕ್ಕೆ ಅಮಿತ್ ಶಾ ಎದಿರೇಟು

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸಖ್ಯ ತೊರೆದಿರುವ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಅವಕಾಶಕ್ಕಾಗಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಆದರೆ, ರಾಜ್ಯಪಾಲರು ಹೆಚ್ಚು ದಿನ ಕಾಲಾವಕಾಶ ನೀಡದ್ದರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಮಹಾರಾಷ್ಟ್ರದಲ್ಲಿ ಈ ಬೆಳವಣಿಗೆ ನಡೆಯುತ್ತಿದ್ದಂತೆ ಕೇಂದ್ರ ಸಚಿವರಾಗಿದ್ದ ಶಿವಸೇನೆಯ ಅರವಿಂದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು