ಬುಧವಾರ, ಫೆಬ್ರವರಿ 19, 2020
29 °C

ಪೂರ್ವ–ಪಶ್ಚಿಮ ಮೆಟ್ರೊ ಉದ್ಘಾಟನೆಗೆ ಆಹ್ವಾನ ನೀಡದ ಕೇಂದ್ರ: ಮಮತಾ ಬೇಸರ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ಕೋಲ್ಕತ: ಇಲ್ಲಿನ ಪೂರ್ವ–ಪಶ್ಚಿಮ ಮೆಟ್ರೊ ಕಾರಿಡಾರ್‌ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸದ ಕೇಂದ್ರ ಸರ್ಕಾರದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೇಸರ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಶುಕ್ರವಾರ ಮಾತನಾಡಿರುವ ಅವರು, ‘ಪೂರ್ವ–ಪಶ್ಚಿಮ ಮೆಟ್ರೊ ಯೋಜನೆ ಸಾಕಾರದ ಹಿಂದೆ ನಮ್ಮದು ಕಠಿಣ ಪರಿಶ್ರಮ ಇದೆ. ನಾನು ಕೇಂದ್ರದಲ್ಲಿ ರೈಲ್ವೆ ಮಂತ್ರಿ ಆಗಿದ್ದಾಗ ಈ ಯೋಜನೆಯನ್ನು ಮಂಜೂರು ಮಾಡಿಸಿದ್ದೆ. ಆದರೆ, ಈ ಯೋಜನೆಯ ಉದ್ಘಾಟನೆ ಬಗ್ಗೆ ಕೇಂದ್ರ ಸರ್ಕಾರವು ನನಗೆ ಯಾವುದೇ ಮಾಹಿತಿ ನೀಡಲಿಲ್ಲ. ಇದರಿಂದ ನನಗೆ ತೀವ್ರ ಬೇಸರವಾಗಿದೆ’ ಎಂದು ಮಮತಾ ಹೇಳಿದ್ದಾರೆ.  

ಕೇಂದ್ರ ಸರ್ಕಾರದ ಈ ನಡೆ ಖಂಡಿಸಿ ಉದ್ಘಾಟನೆ ಸಮಾರಂಭವನ್ನು ಬಹಿಸ್ಕರಿಸಲು ಟಿಎಂಸಿ ನಿರ್ಧರಿಸಿತ್ತು. 

ಪೂರ್ವ–ಪಶ್ಚಿಮ ಮೆಟ್ರೊ ಕಾರಿಡಾರ್‌ ಅನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರು ಗುರುವಾರ ಸಂಜೆ ಉದ್ಘಾಟಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು