ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆಯತ್ತ ಬಿಜೆಪಿ ಚಿತ್ತ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೆಲೆ ವಿಸ್ತರಣೆ:
Last Updated 23 ಮೇ 2019, 18:11 IST
ಅಕ್ಷರ ಗಾತ್ರ

ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಜತೆ ಪ್ರಬಲಸಂಘರ್ಷ ನಡೆಸಿದ್ದಬಿಜೆಪಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದರೆ, ಎಡಪಕ್ಷಗಳು ಹೀನಾಯ ಸೋಲು ಅನುಭವಿಸಿವೆ.‌ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿರುವ ಗೆಲುವಿನಿಂದ 2021ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ರಹದಾರಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಸ್ಥಾನಗಳಲ್ಲಿ ತೃಣಮೂಲ ಕಾಂಗ್ರೆಸ್ 23 ಮತ್ತು ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್‌ ಕೇವಲ ಎರಡುಸ್ಥಾನಗಳಲ್ಲಿ ಜಯ ಸಾಧಿಸಿದೆ. ಆದರೆ, 34 ವರ್ಷಗಳ ಕಾಲ ಸತತ ಆಡಳಿತ ನಡೆಸಿದ್ದ ಸಿಪಿಐ(ಎಂ) ನೇತೃತ್ವದ ಎಡರಂಗ ದೂಳಿಪಟವಾಗಿದೆ.

ಯಾವುದೇ ಒಂದು ಸ್ಥಾನದಲ್ಲೂ ಎಡಪಕ್ಷಗಳ ಅಭ್ಯರ್ಥಿಗಳು ಜಯಗಳಿಸಿಲ್ಲ. 2014ರ ಲೋಕಸಭೆ ಚುನಾವಣೆಯಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಈಗ 17 ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿದೆ. ತೃಣಮೂಲ ಕಾಂಗ್ರೆಸ್‌ ಜಯ ಸಾಧಿಸಿರುವ ಕ್ಷೇತ್ರಗಳಲ್ಲೂ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಟಿಎಂಸಿ ಸುಮಾರು ಶೇಕಡ 43.8ರಷ್ಟು ಮತಗಳನ್ನು ಪಡೆದಿದ್ದರೆ ಬಿಜೆಪಿ ಶೇಕಡ 39.81ರಷ್ಟು ಮತಗಳನ್ನು ಪಡೆದುಕೊಂಡಿದೆ. ಎಡರಂಗ ಕೇವಲ ಶೇಕಡ 7.8ರಷ್ಟು ಮತಗಳನ್ನು ಪಡೆದಿದೆ. ಕಾಂಗ್ರೆಸ್‌ ಕೇವಲ ಶೇಕಡ 6.66ರಷ್ಟು ಮತಗಳನ್ನು ಪಡೆದುಕೊಂಡಿವೆ.

ಟಿಎಂಸಿ ಮತ್ತು ಎಡಪಕ್ಷಗಳ ಪ್ರಾಬಲ್ಯದ ನೆಲದಲ್ಲಿ ಕೇಸರಿ ಪಡೆ ನೆಲೆಯೂರಲು ಎಲ್ಲ ರೀತಿಯ ತಂತ್ರಗಳನ್ನು ಅನುಸರಿಸಿತ್ತು. ಪ್ರಧಾನಿ ನರೇಂದ್ರ ಮೋದಿ 17 ರ‍್ಯಾಲಿಗಳನ್ನು ನಡೆಸಿದ್ದರು. ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ(ತಿದ್ದುಪಡಿ) ಮಸೂದೆ ವಿಷಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದರು.ಟಿಎಂಸಿ ಮತ್ತು ಬಿಜೆಪಿ ಸಂಘರ್ಷದಿಂದ ರಾಜ್ಯದಲ್ಲಿ ಬೀದಿ ಕಾಳಗಗಳು ಸಹ ನಡೆದಿದ್ದವು. ಜಂಗಿಪುರ ಕ್ಷೇತ್ರದ ಹಾಲಿ ಸಂಸದ ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಪುತ್ರ ಅಭಿಜಿತ್‌ ಮುಖರ್ಜಿ ಪರಾಭವಗೊಂಡಿದ್ದಾರೆ.

***

ಅತಿ ಹೆಚ್ಚು ಧ್ರುವೀಕರಣ ಹೊಂದಿರುವ ಈ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪರ ನಿರ್ಣಾಯಕ ಫಲಿತಾಂಶ ನೀಡಿದ್ದಾರೆ. ಪಕ್ಷದ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ತಪ್ಪುಗಳ ಬಗ್ಗೆ ವಿಶ್ಲೇಷಣೆ ನಡೆಸುತ್ತೇವೆ.

-ಸೀತಾರಾಂ ಯೆಚೂರಿ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ

‘ಗೆದ್ದವರಿಗೆ ಅಭಿನಂದನೆಗಳು. ಆದರೆ, ಸೋತವರೆಲ್ಲರೂ ಸೋತವರಲ್ಲ. ಫಲಿತಾಂಶದ ಸಂಪೂರ್ಣ ಪರಾಮರ್ಶೆ ಮಾಡಬೇಕಾಗಿದೆ’

-ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT