ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ70 ಅಲ್ಪಸಂಖ್ಯಾತ ಮಕ್ಕಳಿರುವ ಶಾಲೆಯಲ್ಲಿ ಊಟದ ಕೊಠಡಿ ನಿರ್ಮಾಣಕ್ಕೆ ದೀದಿ ಚಿಂತನೆ

Last Updated 28 ಜೂನ್ 2019, 7:57 IST
ಅಕ್ಷರ ಗಾತ್ರ

ಕೋಲ್ಕತ್ತ:ಪಶ್ಚಿಮ ಬಂಗಾಳ ಸರ್ಕಾರವು ಶೇ 70ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಮತ್ತು ಅನುದಾನಿತಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆಗೆ ಊಟದ ಕೊಠಡಿ ನಿರ್ಮಿಸಲು ನಿರ್ಧರಿಸಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಮುಸ್ಲಿಂ ಸಮಾಜವನ್ನು ಓಲೈಸಲು ಈ ಮೂಲಕ ಮುಂದಾಗಿದೆ. ಹೊಸದೊಂದು ರಾಜಕೀಯಕ್ಕೆ ನಾಂದಿ ಹಾಡಿದ್ದಾರೆ.

ಈ ಸಂಬಂಧ ಪ್ರಸ್ತಾವನ್ನು ಮುಂದಿರಿಸಿ ಆದೇಶ ಹೊರಡಿಸಿರುವ ಸರ್ಕಾರ, ಆದೇಶವನ್ನು ಜಾರಿಗೊಳಿಸಲು ಶೇಕಡಾ 70ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿರುವ ಶಾಲೆಗಳ ಪಟ್ಟಿಯನ್ನು ತುರ್ತಾಗಿ ನೀಡುವಂತೆ ಪಶ್ಚಿಮ ಬಂಗಾಳ ಅಲ್ಪಸಂಖ್ಯಾತ ವ್ಯವಹಾರಗಳ ಮತ್ತು ಮದರಸಾ ಶಿಕ್ಷಣ ಇಲಾಖೆಗೆ ಸೂಚಿಸಿದೆ.

ಮಧ್ಯಾಹ್ನದ ಬಿಸಿಯೂಟಕ್ಕಾಗಿ ಊಟದ ಕೊಠಡಿಗಳನ್ನು ನಿರ್ಮಿಸಲು ಜೂನ್‌ 28ರ ಒಳಗೆ ಶೇ 70ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರುವ ಶಾಲೆಗಳ ಪಟ್ಟಿಯನ್ನು ನೀಡುವಂತೆ ಅಧಿಕಾರಿಗಳು ಆದೇಶ ಹೊರಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT