ಭಾನುವಾರ, ಜೂನ್ 20, 2021
28 °C

ಲೋಕಸಭೆ: ಅಧೀರ್‌ ರಂಜನ್‌ ಚೌಧರಿ ಕಾಂಗ್ರೆಸ್‌ ನಾಯಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳದ ಅಧೀರ್‌ ರಂಜನ್‌ ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕರಾಗಲಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅವರ ನಿವಾಸದಲ್ಲಿ ನಡೆದ ಹಿರಿಯ ಮುಖಂಡರ ಸಭೆಯಲ್ಲಿ ಆಯ್ಕೆ ನಡೆಯಿತು.

ರಾಹುಲ್‌ ಗಾಂಧಿ ಪಕ್ಷದ ನಾಯಕರಾಗಲು ನಿರಾಕರಿಸಿದ ನಂತರ ಚೌಧರಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಪಶ್ಚಿಮ ಬಂಗಾಳದ ಬಹರಾಂಪುರ ಕ್ಷೇತ್ರದಿಂದ ಸತತ ಐದನೇ ಬಾರಿಗೆ ಇವರು ಆಯ್ಕೆಯಾಗಿದ್ದಾರೆ. ಕೇರಳದ ಸಂಸದ ಕೊಡಿಕುನ್ನಿಲ್‌ ಸುರೇಶ್‌ ಅವರು ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯ ನಿರ್ವಹಿಸುವರು.

‘ಪಕ್ಷ ನನಗೆ ಈ ದೊಡ್ಡ ಹೊಣೆ ನೀಡಿದೆ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ’ ಎಂದು ಚೌಧರಿ ಮಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು