ಶನಿವಾರ, ಜೂಲೈ 4, 2020
21 °C

ಪಶ್ಚಿಮ ಬಂಗಾಳ: ಕೋವಿಡ್‌ ವಿಷಯ ಪಠ್ಯಕ್ರಮದಲ್ಲಿ ಸೇರಿಸಲು ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್‌–ಪ್ರಾತಿನಿಧಿಕ ಚಿತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರವು ಮುಂದಿನ ಶೈಕ್ಷಣಿಕ ಸಾಲಿನಿಂದ ಶಾಲಾ ಪಠ್ಯಕ್ರಮದಲ್ಲಿ ‘ಕೋವಿಡ್‌’ ಕುರಿತ ‍ಪಾಠವನ್ನು ಸೇರಿಸಲು ಚಿಂತಿಸಿದೆ. ಈ ಮೂಲಕ ಮಕ್ಕಳಲ್ಲಿ ಕೋವಿಡ್‌–19ರ ಬಗ್ಗೆ ಅರಿವು ಮೂಡಿಸಲು ಸರ್ಕಾರ ಮುಂದಾಗಿದೆ.

ಕೊರೊನಾ ವೈರಸ್‌ನ ಸ್ವರೂಪ ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಕ್ಕಳಿಗೆ ಪಠ್ಯಕ್ರಮದ ಮೂಲಕ ಹೇಗೆ ಮಾಹಿತಿ ನೀಡುತ್ತಿರಾ ಎಂದು ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥಾ ಚಟರ್ಜಿ ಅವರು ಇತ್ತೀಚೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಕೇಳಿದ್ದರು. ಅದರ ಬೆನ್ನಲ್ಲೆ ಶಿಕ್ಷಣ ಇಲಾಖೆ ಈ ಕುರಿತು ಯೋಜನೆ ರೂಪಿಸುತ್ತಿದೆ ಎಂದು ಪಠ್ಯಕ್ರಮ ರಚನಾ ಸಮಿತಿಯ ಅಧಿಕಾರಿಯೊಬ್ಬರು ಮಾಹಿತಿ ನೀಡದ್ದಾರೆ.

‘ಪಠ್ಯಕ್ರಮ ಸಮಿತಿಯ ಸದಸ್ಯರು ಮತ್ತು ತಜ್ಞರ ಜತೆ ಸೇರಿ ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಕೇವಲ ಶಿಕ್ಷಕರು, ಶಿಕ್ಷಣ ತಜ್ಞರು ಮಾತ್ರವಲ್ಲದೇ ವೈದ್ಯಯರು, ವೈರಾಲಜಿ ತಜ್ಞರು, ಸಾಂಕ್ರಾಮಿಕ ರೋಗಶಾಸ್ತ್ರಜ್ಞರಿಂದಲೂ ‌ಸಲಹೆಗಳನ್ನು ಪಡೆಯಲಿದ್ದೇವೆ’ ಎಂದು ಪಠ್ಯಕ್ರಮ ಸಮಿತಿಯ ಅಧ್ಯಕ್ಷ ಅವೀಕ್‌ ಮಜುಂದಾರ್‌ ತಿಳಿಸಿದ್ದಾರೆ.

ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢ ಶಾಲಾ ಹಂತದವರೆಗಿನ ತರಗತಿಗಳಿಗೆ ಪಠ್ಯಕ್ರಮದಲ್ಲಿ ಕೊರೊನಾ ವೈರಸ್‌ನ ಬಗೆಗಿನ ಅಧ್ಯಾಯವನ್ನು ಸೇರಿಸುವ ಬಗ್ಗೆ ಶಿಕ್ಷಣ ಇಲಾಖೆಯು ಚಿಂತನೆ ನಡೆಸುತ್ತಿದೆ. ಪ್ರಾಥಮಿಕ ಹಂತದ ವಿದ್ಯಾರ್ಥಿಗಳಿಗೆ ಸ್ವಚ್ಛತೆ, ಸುರಕ್ಷತಾ ಕ್ರಮಗಳ ಬಗ್ಗೆ ಹಾಗೂ ಪ್ರೌಢಶಾಲಾ ಹಂತದ ಮಕ್ಕಳಿಗೆ ಕೋವಿಡ್ ಸಾಂಕ್ರಾಮಿಕ ರೋಗ ಯಾವ ರೀತಿ ಹರಡುತ್ತದೆ ಎಂಬುದರ ಬಗ್ಗೆ ಪಠ್ಯದ ಮೂಲಕ ತಿಳಿಸುವ ಉದ್ದೇಶ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು