ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19ಗೆ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಬಲಿ: ಮೃತರ ಸಂಖ್ಯೆ 8ಕ್ಕೆ ಏರಿಕೆ

Last Updated 23 ಮಾರ್ಚ್ 2020, 13:31 IST
ಅಕ್ಷರ ಗಾತ್ರ

ಕೋಲ್ಕತ್ತ: ಕೊರೊನಾ ವೈರಸ್ ಸೋಂಕು ತಗುಲಿದ್ದ 55 ವರ್ಷದ ವ್ಯಕ್ತಿಯೊಬ್ಬರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇದು ಮೊದಲನೇ ಪ್ರಕರಣವಾಗಿದ್ದು, ದೇಶದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಕೋಲ್ಕತ್ತಾದ ಡುಂ ಡುಂನ ಸೋಂಕಿತ ವ್ಯಕ್ತಿಗೆ ಎಎಂಆರ್‌ಐ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಸಂಭವಿಸಿದ ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ವ್ಯಕ್ತಿಯು ವಿದೇಶಕ್ಕೆ ತೆರಳಿದ್ದ ಮಾಹಿತಿ ಇರಲಿಲ್ಲ. ಆದರೆ ಕಳೆದ ಫೆಬ್ರುವರಿಯಲ್ಲಿ ಛತ್ತೀಸಗಡದ ಬಿಲಾಸ್‌ಪುರಕ್ಕೆ ಭೇಟಿ ನೀಡಿದ್ದರು. ವ್ಯಕ್ತಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿತ್ತು. ಆಗ ನಾವು ಸರಿಯಾದ ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದೆವು. ಹೀಗಿದ್ದರೂ ಅವರು ಇಂದು ಮಧ್ಯಾಹ್ನ ಮೃತಪಟ್ಟರು ಎಂದು ಆಸ್ಪತ್ರೆಯ ವಕ್ತಾರ ತಿಳಿಸಿದ್ದಾರೆ.

ವ್ಯಕ್ತಿಯು ಕುಟುಂಬ ಸದಸ್ಯರ ಮೇಲೂ ನಿಗಾ ವಹಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌ನಲ್ಲಿರಿಸಲಾಗಿದೆ.

ಚೀನಾದ ವುಹಾನ್‌ನಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು ಇದೀಗ187 ದೇಶಗಳಿಗೆ ವ್ಯಾಪಿಸಿದೆ. ಕೋವಿಡ್-19ಗೆಕಲಬುರ್ಗಿಯ ಮೋಮಿನಪುರ ನಿವಾಸಿ ಮೊಹ್ಮದ್ ಹುಸೇನ್ ಸಿದ್ದಿಕಿ (76) ಮೃತಪಟ್ಟಿದ್ದರು. ಇದು ದೇಶದ ಮೊದಲ ಪ್ರಕರಣವಾಗಿತ್ತು. ಅದಾದ ಬಳಿಕ ದೆಹಲಿ, ಮುಂಬೈ, ಪಂಜಾಬ್, ರಾಜಸ್ಥಾನ ಸೇರಿದಂತೆ ಇತರೆಡೆ ಒಟ್ಟಾರೆ 7 ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT