ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡಲು ಅವಕಾಶವಿದೆ: ಸುಮಲತಾ

Last Updated 26 ಮೇ 2019, 7:42 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿರುವ ಸುಮಲತಾ ಅಂಬರೀಷ್‌ ಅವರು ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿ ನಾಯಕರಾದ ಬಿ.ಎಸ್‌ ಯಡಿಯೂರಪ್ಪ, ಎಸ್‌.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಮೊದಲಿಗೆ ಡಾಲರ್ಸ್‌ ಕಾಲೋನಿಯ ಯಡಿಯೂರಪ್ಪ ಅವರ ನಿವಾಸಕ್ಕೆತೆರಳಿದ ಸುಮಲತಾ ಅವರು, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ತೆರಳಿದ ಸುಮಲತಾಧನ್ಯವಾದ ಅರ್ಪಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನನಗೆ ಬೆಂಬಲ ನೀಡಿದ ಪ್ರತಿಯೊಬ್ಬರನ್ನೂ ಭೇಟಿಯಾಗಿ ಕೃತಜ್ಞತೆ ಅರ್ಪಿಸುವುದು ನನ್ನ ಕರ್ತವ್ಯ,’ ಎಂದರು.ಅಲ್ಲದೆ, ಕೇಂದ್ರದಲ್ಲಿ ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡಲು ಅವಕಾಶವಿದೆ. ಮಂಡ್ಯ ಅಭಿವೃದ್ಧಿಗಾಗಿ ಜನರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡುತ್ತೇನೆ,’ ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು ಮಾತನಾಡಿದ ಯಡಿಯೂರಪ್ಪ ಅವರು, ಬಿಜೆಪಿ ಬೆಂಬಲ ನೀಡಿದ ಕಾರಣಕ್ಕಾಗಿ ಮತ್ತು ಮೋದಿ ಅವರು ಮೈಸೂರಿಗೆ ಬಂದು ಸುಮಲತಾ ಹೆಸರು ಹೇಳಿದ್ದರಿಂದ, ಮಂಡ್ಯ ಜನ ಪಕ್ಷಾತೀತವಾಗಿ ಬೆಂಬಲ ನೀಡಿದ್ದರಿಂದ ಸುಮಲತಾ ಅವರು ದೊಡ್ಡ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ಸುನಾಮಿಯಂತೆ ಗೆದ್ದಿದೆ

‘ರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸುನಾಮಿಯಂತೆ ಗೆದ್ದಿದೆ. ಇದಕ್ಕೆ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಇನ್ನು ಮಂಡ್ಯದ ನನ್ನ ಗೆಲುವು ಐತಿಹಾಸಿಕ ಎಂದೇ ಹೇಳಬೇಕು,’ ಎಂದು ಸುಮಲತಾ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT