ಕಲ್ಲುತೂರಾಟಗಾರರ ಪ್ರಕರಣ ರದ್ದು; ಒಮರ್

ಶುಕ್ರವಾರ, ಏಪ್ರಿಲ್ 26, 2019
24 °C

ಕಲ್ಲುತೂರಾಟಗಾರರ ಪ್ರಕರಣ ರದ್ದು; ಒಮರ್

Published:
Updated:

ಶ್ರೀನಗರ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಕಲ್ಲು ತೂರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುತ್ತೇವೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಲೋಕಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

‘ಮರಗಳ್ಳರ ಕಡಿವಾಣಕ್ಕೆಂದು ಜಾರಿಗೆ ತರಲಾಗಿದ್ದ ಸಾರ್ವಜನಿಕರ ಭದ್ರತಾ ಕಾಯ್ದೆಯನ್ನು ಅಮಾಯಕರ ಬಂಧನಕ್ಕೆ ಬಳಸಿಕೊಳ್ಳಲಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ನಾವು ಸರ್ಕಾರ ರಚಿಸಿದರೆ ಈ ಕಾಯ್ದೆಯನ್ನೂ ಕಿತ್ತೊಗೆಯುತ್ತೇವೆ. ದೇವರ ದಯೆಯಿಂದ 2019ರಲ್ಲೇ ಸರ್ಕಾರ ರಚನೆಯಾದರೆ, ಕೆಲವೇ ದಿನಗಳಲ್ಲಿ ಈ ಕಾಯ್ದೆಯನ್ನು ರದ್ದುಪಡಿಸುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದ ಜನರಿಗೆ ನಾನು ಭರವಸೆ ನೀಡುತ್ತಿದ್ದೇನೆ’ ಎಂದು ಅವರು ಘೋಷಿಸಿದರು.

‘ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿತ್ತು. ಈ ಬಾರಿಯೂ ಅಲ್ಲಿನ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. ನೀವೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕು’ ಎಂದು ಒಮರ್ ಅಬ್ದುಲ್ಲಾ ಕರೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !