‘ಕೇಂದ್ರ ಸರ್ಕಾರ ಕೊಟ್ಟ ಭರವಸೆ ಈಡೇರಿಸದಿದ್ದರೆ ಪದ್ಮಭೂಷಣ ಹಿಂತಿರುಗಿಸುತ್ತೇನೆ’

7

‘ಕೇಂದ್ರ ಸರ್ಕಾರ ಕೊಟ್ಟ ಭರವಸೆ ಈಡೇರಿಸದಿದ್ದರೆ ಪದ್ಮಭೂಷಣ ಹಿಂತಿರುಗಿಸುತ್ತೇನೆ’

Published:
Updated:

ರಾಳೇಗಣ ಸಿದ್ಧಿ,ಮಹಾರಾಷ್ಟ್ರ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟಿರುವ ಭರವಸೆಗಳನ್ನು ಈಡೇರಿಸದಿದ್ದರೆ ನನಗೆ ಕೊಟ್ಟಿರುವ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಗೆ ಹಿಂತಿರುಗಿಸುತ್ತೇನೆ’ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.

ಇದನ್ನೂ ಓದಿ... ನನಗೇನಾದರು ಆದರೆ, ಪ್ರಧಾನಿಯೇ ಹೊಣೆ: ಅಣ್ಣಾ ಹಜಾರೆ

ಕೇಂದ್ರದಲ್ಲಿ ಲೋಕಪಾಲ್‌ ಹಾಗೂ ರಾಜ್ಯಗಳಲ್ಲಿ ಲೋಕಾಯುಕ್ತ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಸ್ಥಾಪಿಸಬೇಕು ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಸ್ವಗ್ರಾಮದಲ್ಲಿ ಅಣ್ಣಾ ಹಜಾರೆ ಜ.30ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ.

ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ನಂಬಿಕೆಯನ್ನು ಉಲ್ಲಂಘಿಸಿದೆ’ ಎಂದರು.

81 ವರ್ಷದ ಹಜಾರೆ ಅವರಿಗೆ 1992ರಲ್ಲಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಭೂಷಣ’ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ... ಲೋಕಪಾಲ್‌ಗೆ ಆಗ್ರಹಿಸಿ ಅಣ್ಣಾ ಉಪವಾಸ

ಬರಹ ಇಷ್ಟವಾಯಿತೆ?

 • 27

  Happy
 • 4

  Amused
 • 0

  Sad
 • 1

  Frustrated
 • 7

  Angry

Comments:

0 comments

Write the first review for this !