ಭಾನುವಾರ, ಜುಲೈ 25, 2021
28 °C

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ: ಶೀಘ್ರ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

ಸುಪ್ರೀಂ ಕೋರ್ಟ್‌

ನವದೆಹಲಿ: ಸಿಬಿಎಸ್‌ಇ 12ನೇ ತರಗತಿಯ ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಗಳನ್ನು ನಡೆಸಬೇಕೇ, ಬೇಡವೇ ಎನ್ನುವುದರ ಕುರಿತು ಶೀಘ್ರದಲ್ಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 

ಈ ಹಿಂದೆ ಜುಲೈ 1ರಿಂದ ಜುಲೈ 15ರವರೆಗೆ ಪರೀಕ್ಷೆ ನಡೆಸುವುದಾಗಿ ಸಿಬಿಎಸ್‌ಇ ಘೋಷಿಸಿತ್ತು. ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಪರೀಕ್ಷೆಗಳನ್ನು ರದ್ದುಗೊಳಿಸಲು ಕೋರಿ ಪೋಷಕರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖಾನ್‌ವಿಲ್ಕರ್‌ ಅವರಿದ್ದ ನ್ಯಾಯಪೀಠವು ವಿಡಿಯೊ ಕಾನ್ಫರೆನ್ಸ್‌ ಮೂಲಕ ಬುಧವಾರ ಕೈಗೆತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ನೀಡುವಂತೆ ಸಿಬಿಎಸ್‌ಇ ಪರ ವಕೀಲ ರೂಪೇಶ್‌ ಕುಮಾರ್‌ ಕೋರಿದರು. 

ಸಿಬಿಎಸ್‌ಇ ಮನವಿ ಪರಿಗಣಿಸಿದ ಪೀಠವು ಅರ್ಜಿ ವಿಚಾರಣೆಯನ್ನು ಜೂನ್‌ 23ಕ್ಕೆ ಮುಂದೂಡಿದೆ. ಕೋವಿಡ್‌–19 ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣ, ಅಂತಿಮ ಪರೀಕ್ಷೆ ನಡೆಸದೆ, ಪೂರ್ವಭಾವಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಪರಿಗಣಿಸಿ  ಫಲಿತಾಂಶವನ್ನು ನೀಡಬೇಕು ಎಂದು ಪೋಷಕರು ಅರ್ಜಿಯಲ್ಲಿ ಕೋರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು