ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿಗೆ ಬದ್ಧ: ರಾಹುಲ್‌ ಗಾಂಧಿ

ಸಮಾಜವಾದಿ ಪಕ್ಷದ ಮೊದಲ ಪಟ್ಟಿ ಬಿಡುಗಡೆ
Last Updated 8 ಮಾರ್ಚ್ 2019, 18:28 IST
ಅಕ್ಷರ ಗಾತ್ರ

ಜೆಪೋರ್‌ (ಒಡಿಶಾ): ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ‘ಮಹಿಳಾ ಮೀಸಲಾತಿ ಮಸೂದೆ’ ಜಾರಿಗೊಳಿಸಲು ಬದ್ಧವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶುಕ್ರವಾರ ಮಹಿಳೆಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಮಹಿಳೆಯರ ಸಹಭಾಗಿತ್ವ ಇಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

‘ಮಹಿಳೆಯರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಮಹಿಳಾ ಮೀಸಲಾತಿ ಮಸೂದೆ ನಿಜಕ್ಕೂ ಪರಿಣಾಮಕಾರಿ ಅಸ್ತ್ರ. ಮಹಿಳೆಯರು ರಾಜಕೀಯದಿಂದ ದೂರ ಉಳಿಯದೆ ಹೆಚ್ಚು ಸಕ್ರಿಯರಾಗಿ ಪಾಲ್ಗೊಳ್ಳಬೇಕಿದೆ’ ಎಂದು ಸಲಹೆ ಮಾಡಿದರು.

ಒಡಿಶಾದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮಹಿಳೆಯರಿಗೆ ಅದರಲ್ಲೂ ದಲಿತ, ಬುಡಕಟ್ಟು ಜನಾಂಗ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ಹಂತದಲ್ಲೂ ಉಚಿತ ಶಿಕ್ಷಣ ನೀಡಲಾಗುವುದು ಎಂದು ರಾಹುಲ್‌ ಗಾಂಧಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT