ಬುಧವಾರ, ಮೇ 27, 2020
27 °C

ಜಮ್ಮು ಮತ್ತು ಕಾಶ್ಮೀರ: ಕೋವಿಡ್‌-19 ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಒಂದೇ ದಿನಕ್ಕೆ 17 ಮಂದಿಗೆ ಕೋವಿಡ್‌ –19 ಸೋಂಕು ದೃಢಪಟ್ಟಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 92ಕ್ಕೆ ಏರಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲಾ ಆಸ್ಪತ್ರೆಯಲ್ಲಿ 8, ಶ್ರೀನಗರದ ಎಸ್‌ಕೆಐಎಂಎಸ್‌ ಆಸ್ಪತ್ರೆಯಲ್ಲಿ ಐದು, ಶ್ರೀನಗರದ ಎದೆರೋಗಗಳ ಆಸ್ಪತ್ರೆಯಲ್ಲಿ ಒಂದು, ಉದ್ದಂಪುರ ಜಿಲ್ಲೆಯಲ್ಲಿ ಮೂರು ಪ್ರಕರಣ ದೃಢಪಟ್ಟಿದೆ.

14ರಲ್ಲಿ 9 ಮಂದಿ ಗುಣಮುಖ:  ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ನಲ್ಲಿ ಈವರೆಗೆ ದೃಢಪಟ್ಟಿದ್ದ ಕೋವಿಡ್‌–19 ಸೋಂಕಿತ 14 ಮಂದಿಯಲ್ಲಿ 9 ರೋಗಿಗಳು ಗುಣಮುಖರಾಗಿದ್ದಾರೆ.

ಶನಿವಾರ ಇಬ್ಬರು ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದು, 14 ಸೋಂಕಿತರಲ್ಲಿ ಒಟ್ಟು ಒಂಬತ್ತು ಮಂದಿ ಕಳೆದ 12 ದಿನಗಳಲ್ಲಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಿಗ್ಜಿನ್‌ ಸಂಫೆಲ್‌ ತಿಳಿಸಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು