ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದ 4,048 ಪೊಲೀಸರಿಗೆ ಕೋವಿಡ್-19 ಸೋಂಕು, 88 ಹೊಸ ಪ್ರಕರಣ

Last Updated 21 ಜೂನ್ 2020, 12:20 IST
ಅಕ್ಷರ ಗಾತ್ರ

ಮುಂಬೈ: ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸಾವಿರಾರು ಪೊಲೀಸರಿಗೂ ಸೋಂಕು ತಗುಲಿದೆ. ಈ ಪೈಕಿ ಮಹಾರಾಷ್ಟ್ರದಲ್ಲೇ ಹೆಚ್ಚಿನ ಪೊಲೀಸರು ಸೋಂಕಿಗೆ ಒಳಗಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ರಾಜ್ಯದ 88 ಮಂದಿ ಪೊಲೀಸರಿಗೆ ಕೋವಿಡ್-19 ಇರುವುದು ದೃಢಪಟ್ಟಿದೆ ಎಂದು ರಾಜ್ಯ ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ

ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ 4,048 ಜನ ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 1,001 ಸಕ್ರಿಯ ಪ್ರಕರಣಗಳಿವೆ.

ಈವರೆಗೂ ಕೋವಿಡ್-19ನಿಂದಾಗಿ 47 ಜನ ಪೊಲೀಸರು ಸಾವಿಗೀಡಾಗಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 3,874 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಮತ್ತು 160 ಜನರು ಮೃತಪಟ್ಟಿದ್ದರೆ, ಒಟ್ಟಾರೆ ಸೋಂಕಿತರ ಸಂಖ್ಯೆಯು 1,28,205ಕ್ಕೆ ಏರಿಕೆಯಾಗಿದೆ. ಈವರೆಗೂ ರಾಜ್ಯದಲ್ಲಿ 5,984 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT