ಮಂಗಳವಾರ, ಫೆಬ್ರವರಿ 18, 2020
17 °C

ಶರದ್‌ ಪವಾರ್‌ ನಿವಾಸದ ಭದ್ರತೆ ಹಿಂಪಡೆದ ಕೇಂದ್ರ: ರಾಜಕೀಯ ಪ್ರೇರಿತ ಎಂದ ಎನ್‌ಸಿಪಿ

ಪಿಟಿಐ Updated:

ಅಕ್ಷರ ಗಾತ್ರ : | |

Sharad pawar

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರ ನವದೆಹಲಿಯಲ್ಲಿರುವ ಅಧಿಕೃತ ನಿವಾಸಕ್ಕೆ ನೀಡಲಾಗಿದ್ದ ‘ವೈ’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಎನ್‌ಸಿಪಿ ಆರೋಪಿಸಿದೆ. 

‘ಕೇಂದ್ರ ಸರ್ಕಾರ ‘ಸೇಡಿನ ರಾಜಕೀಯ’ ಮಾಡುತ್ತಿದೆ. ಇಂಥ ನಿರ್ಧಾರದಿಂದ ಪಕ್ಷದ ನಾಯಕರು ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಮಹಾರಾಷ್ಟ್ರದ ಸಚಿವ, ಎನ್‌ಸಿಪಿ ಮುಖ್ಯವಕ್ತಾರ ನವಾಬ್‌ ಮಲಿಕ್‌ ಹೇಳಿದರು. 

‘ಜ.20ರಿಂದ ಭದ್ರತಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು