ಶನಿವಾರ, ಫೆಬ್ರವರಿ 22, 2020
19 °C

ಸಾಲ ಮರುಪಾವತಿಸದ ಮಹಿಳೆಗೆ ಥಳಿತ: ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡಿಗಡ: ಸಾಲ ಮರುಪಾವತಿ ಮಾಡಲಿಲ್ಲವೆಂದು ಮಹಿಳೆಗೆ ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದು ತಲೆಮರೆಸಿಕೊಂಡಿರುವ ನಾಲ್ವರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. 

ಮಹಿಳೆ, ಸುರೇಶ್‌ ಚೌಧರಿ ಅವರಿಂದ ₹23 ಸಾವಿರ ಸಾಲ ಪಡೆದಿದ್ದು, ವಾಪಸ್‌ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಗುಂಪೊಂದು ಮಹಿಳೆಗೆ ಬೆಲ್ಟ್‌ನಿಂದ ಹೊಡೆದಿತ್ತು. ಈ ವೇಳೆ ಅವರ ರಕ್ಷಣೆಗೆ ಬಂದ ವಯಸ್ಸಾದ ಮಹಿಳೆಯ ಮೇಲೂ ಹಲ್ಲೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. 

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಆರೋಪಿಗಳ ವಿರುದ್ಧ ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. 

ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ್ದು, ‘ಈ ರೀತಿಯ ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಟ್ವೀಟ್‌ ಮಾಡಿದ್ದಾರೆ. 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು