ಭಾನುವಾರ, ಮಾರ್ಚ್ 29, 2020
19 °C

ಗರ್ಭಿಣಿ ದಾಖಲಿಸಿಕೊಳ್ಳಲು ವೈದ್ಯರ ನಿರಾಕರಣೆ: ಆಸ್ಪತ್ರೆ ಬಯಲಲ್ಲೇ ಹೆರಿಗೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಬಹರಾಯಿಚ್ (ಉತ್ತರಪ್ರದೇಶ): ಹೆರಿಗೆಗೆಂದು ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಕಾರಣ ಮಹಿಳೆಗೆ ಬಯಲಲ್ಲಿಯೇ ಹೆರಿಗೆಯಾದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ.


ಜಿಲ್ಲಾ ಮಹಿಳಾ ಚಿಕಿತ್ಸಾಲಯ

ಉತ್ತರಪ್ರದೇಶದ ಬಹರಾಯಿಚ್ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಗುರುವಾರ ಹೊಟ್ಟೆನೋವು ಕಾಣಿಸಿಕೊಂಡ ಕೂಡಲೆ ಮಹಿಳೆಯನ್ನು ಸಂಬಂಧಿಕರು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಸಂಬಂಧಿಕರು ಆಗ್ರಹಿಸಿದರೂ ವೈದ್ಯರು ದಾಖಲಿಸಿಕೊಳ್ಳಲಿಲ್ಲ. ಹೆರಿಗೆ ನೋವಿನಿಂದ ನರಳುತ್ತಿದ್ದರೂ ವೈದ್ಯರಾಗಲೀ, ಸಿಬ್ಬಂದಿಯಾಗಲೀ ಉಪಚರಿಸಲಿಲ್ಲ. ಪರಿಣಾಮ ಆಸ್ಪತ್ರೆಯ ಬಯಲಲ್ಲಿಯೇ ಮಹಿಳೆಗೆ ಹೆರಿಗೆಯಾಗಿದೆ. ಹೆರಿಗೆ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ರಗ್ಗನ್ನೇ ಸುತ್ತ ಪರದೆಯನ್ನಾಗಿ ಮಾಡಿಕೊಂಡಿದ್ದಾರೆ.


ಮುಖ್ಯ ವೈದ್ಯಕೀಯ ಅಧೀಕ್ಷಕ ಡಿ.ಕೆ.ಸಿಂಗ್

ಈ ಸಂಬಂಧ ಮುಖ್ಯ ವೈದ್ಯಕೀಯ ಅಧೀಕ್ಷಕ ಡಿ.ಕೆ.ಸಿಂಗ್ ಅವರನ್ನು ಸಂಪರ್ಕಿಸಿದಾಗ 'ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಯಾರು ನಿರಾಕರಿಸಿದರು ಎಂಬುದನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು