ಮಂಗಳವಾರ, ಮಾರ್ಚ್ 9, 2021
31 °C

ಪತ್ರಕರ್ತೆ ಮೇಲೆ ಗುಂಡಿನ ದಾಳಿ ಕೌಟುಂಬಿಕ ಕಲಹ ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವ ದೆಹಲಿಯ ಅಶೋಕ ನಗರದಲ್ಲಿ ಶನಿವಾರ ತಡರಾತ್ರಿ ಪತ್ರಕರ್ತೆ ಮಿತಾಲಿ ಚಂದೋಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಕೌಟುಂಬಿಕ ಕಲಹ ಈ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ಮಿತಾಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಅವರ ಕೈಗೆ ಗುಂಡು ತಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ. 

‘ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಮುಸುಕುಧಾರಿಗಳು ಮತ್ತೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಲು ಯತ್ನಿಸಿದರು. ಮುಂಭಾಗದ ಗಾಜಿನ ಮೇಲೆ ಮೊಟ್ಟೆ ಎಸೆದರು. ಆಗಲೂ ಕಾರು ನಿಲ್ಲಿಸದೆ ಇದ್ದಾಗ ನನ್ನ ಮೇಲೆ ಎರಡು ಸುತ್ತು ಗುಂಡು ಹಾರಿಸಿದರು’ ಎಂದು ಮಿತಾಲಿ ‍ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

‘ನೋಯ್ಡಾದಲ್ಲಿ ಸುದ್ದಿವಾಹಿನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಮಿತಾಲಿ, ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ವೈಯಕ್ತಿಕ ದ್ವೇಷ ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. 

‘ದಾಳಿ ನಡೆದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದವೇ ಎಂದು ಪರಿಶೀಲಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಿದ್ದರೆ ದಾಳಿ ನಡೆಸಿದವರ ಚಹರೆ ಪತ್ತೆ ಸಾಧ್ಯವಾಗಬಹುದು’ ಎಂದು ಅವರು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು