ಸೋಮವಾರ, ಫೆಬ್ರವರಿ 24, 2020
19 °C

ಸಿಜೆಐ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯಿಂದ ವಿಚಾರಣೆ ಬಹಿಷ್ಕಾರ

ಏಜನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಮಹಿಳೆ ತಾವು ನ್ಯಾ. ಎಸ್‌.ಎ ಬೋಬ್ಡೆ ಅವರ ನೇತೃತ್ವದ ಸಮಿತಿಯ ವಿಚಾರಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ತಿಳಿಸಿದ್ದಾರೆ. 

ಈ ಕುರಿತು ಮಂಗಳವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ತಮ್ಮದೇ ಕೆಲ ಮಿತಿಗಳು, ಆತಂಕದ ಹಿನ್ನೆಲೆಯಲ್ಲಿ ನಾನು ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿಯ ವಿಚಾರಣೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಸಮಿತಿಯಿಂದ ನನಗೆ ನ್ಯಾಯ ಸಿಗುವುದಿಲ್ಲ ಎಂದು ನಾನು ಭಾವಿಸಿದ್ದೆನೆ. ಆದ್ದರಿಂದಲೇ ವಿಚಾರಣೆಯಿಂದ ನಾನು ದೂರ ಉಳಿಯುತ್ತಿದ್ದೇನೆ,’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಜೆಐ ರಂಜನ್ ಗೊಗೊಯಿ ವಿರುದ್ಧದ ಆರೋಪ: ವಿಚಾರಣೆಗೆ ತ್ರಿಸದಸ್ಯ ಸಮಿತಿ

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಕಳೆದ ವಾರ ಮೂವರು ನ್ಯಾಯಮೂರ್ತಿಗಳ ಆಂತರಿಕ ತನಿಖಾ ಸಮಿತಿಯನ್ನು ನೇಮಕ ಮಾಡಿದೆ. ಸಮಿತಿಯಲ್ಲಿ ನ್ಯಾ. ಎಸ್‌.ಎ ಬೋಬ್ಡೆ, ಇಂದು ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರು ಇದ್ದಾರೆ. 

ಆದರೆ, ಸ್ವತಂತ್ರ ತನಿಖಾ ಸಮಿತಿ ನೇಮಿಸಬೇಕು ಎಂದು ಆರೋಪ ಮಾಡಿರುವ ಮಹಿಳೆಯೂ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಒತ್ತಾಯಿಸುತ್ತಿವೆ. 

ಇದನ್ನೂ ಓದಿ: ಸಿಜೆಐ ವಿರುದ್ಧದ ಆರೋಪ:ಸ್ವತಂತ್ರ ತನಿಖಾ ಸಮಿತಿಗೆ ಆಗ್ರಹ​

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು