ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾತೃ ವಂದನಾ’ಗೆ ₹2,500 ಕೋಟಿ ಹಂಚಿಕೆ

Last Updated 2 ಜುಲೈ 2019, 6:44 IST
ಅಕ್ಷರ ಗಾತ್ರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಕಳೆದ ಬಾರಿಗಿಂತ ಶೇ 20ರಷ್ಟು ಹೆಚ್ಚು ಅನುದಾನ ಘೋಷಣೆಯಾಗಿದೆ. ಅದರಲ್ಲಿಯೂ ಮಾತೃತ್ವ ಕಾರ್ಯಕ್ರಮ ಮತ್ತು ಮಕ್ಕಳ ಸುರಕ್ಷತಾ ಸೇವೆಗಳಿಗೆ ಆದ್ಯತೆ ನೀಡಲಾಗಿದೆ.

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಗೆ ₹2,500 ಕೋಟಿ ನೀಡಲಾಗಿದೆ. ಕಳೆದ ಸಾಲಿನಲ್ಲಿ ಈ ಯೋಜನೆಗೆ ₹1,200 ಕೋಟಿ ನೀಡಲಾಗಿತ್ತು. ಈ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ತಿಂಗಳ ₹6,000 ನೀಡಲಾಗುತ್ತದೆ.

ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಅಡಿ ಶಿಶು ಸಂರಕ್ಷಣೆಗೆ ನೀಡಲಾಗಿದ್ದ ಅನುದಾನವನ್ನು ₹925 ಕೋಟಿಯಿಂದ ₹1,500ಕ್ಕೆ ಹೆಚ್ಚಿಸಲಾಗಿದೆ.

ಈ ಸಚಿವಾಲಯದಡಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಒಟ್ಟು ₹28,914 ಅನುದಾನ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ಯೋಜನೆಗಳಿಗೆ ಕಳೆದ ಬಾರಿಗಿಂತ ಮೂರು ಪಟ್ಟು ಅನುದಾನವನ್ನು ಹೆಚ್ಚಿಸಲಾಗಿದ್ದು, ₹165 ಕೋಟಿ ಅನುದಾನ ಘೋಷಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT