ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣಗಳ ವಿಚಾರಣೆ: ತ್ವರಿತ ವಿಶೇಷ ನ್ಯಾಯಾಲಯಗಳು ಶೀಘ್ರ ಕಾರ್ಯಾರಂಭ

Last Updated 12 ಆಗಸ್ಟ್ 2019, 18:57 IST
ಅಕ್ಷರ ಗಾತ್ರ

ನವದೆಹಲಿ : ಬಾಕಿ ಇರುವ ಅತ್ಯಾಚಾರ ಪ್ರಕರಣಗಳ ಶೀಘ್ರ ವಿಲೇವಾರಿಗೆ 1,023 ತ್ವರಿತ ವಿಶೇಷ ನ್ಯಾಯಾಲಯಗಳು ಅಕ್ಟೋಬರ್ 2ರಿಂದ ಕಾರ್ಯಾರಂಭವಾಗುವ ಸಾಧ್ಯತೆ ಇದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

ಕಾನೂನು ಸಚಿವಾಲಯದ ಉದ್ದೇಶಿತ ಈ ಯೋಜನೆಗೆ ₹767.25 ಕೋಟಿ ಅಗತ್ಯವಿದ್ದು ನಿರ್ಭಯಾ ನಿಧಿಯಡಿ ಒಂದು ವರ್ಷಕ್ಕೆ ಕೇಂದ್ರ ಸರ್ಕಾರ ₹474 ಕೋಟಿ ಭರಿಸಲಿದೆ.

ವೆಚ್ಚಕ್ಕೆ ಸಂಬಂಧಿಸಿದ ಹಣಕಾಸು ಸಮಿತಿಯ ಶಿಫಾರಸು ಮತ್ತು ಕಾನೂನು ಸಚಿವರ ಅನುಮೋದನೆಯ ನಂತರ ಈ ಪ್ರಸ್ತಾವವನ್ನು ಹಣಕಾಸು ಸಚಿವರ ಒಪ್ಪಿಗೆಗಾಗಿ ಕಳುಹಿಸಲಾಗಿದೆ ಎಂದುನ್ಯಾಯಾಂಗ ಇಲಾಖೆಯು ಆಗಸ್ಟ್‌ 8ರಂದು ಕ್ಯಾಬಿನೆಟ್‌ ಸೆಕ್ರೆಟರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

‘ಎಎಫ್‌ಟಿಎಸ್‌ಸಿ ಯೋಜನೆಯನ್ನು ಅಕ್ಟೋಬರ್‌ 2ರಿಂದ ಪ್ರಾರಂಭಿಸಲು ಯೋಜಿಸಲಾಗಿದ್ದು, ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೊದಲ ಹಂತದಲ್ಲಿ ಒಂಬತ್ತು ರಾಜ್ಯಗಳಲ್ಲಿ777 ತ್ವರಿತ ವಿಶೇಷ ನ್ಯಾಯಾಲಯಗಳನ್ನು ಮತ್ತು ಎರಡನೇ ಹಂತದಲ್ಲಿ 246 ನ್ಯಾಯಾಲಯಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಈ ಹಿಂದೆ ತಿಳಿಸಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಗೆ (ಪೊಕ್ಸೊ) ತಿದ್ದುಪಡಿ ತರಲು ಸಂಸತ್‌ ಇತ್ತೀಚೆಗೆ ಅನುಮೋದನೆ ನೀಡಿದೆ.ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಅವಕಾಶವನ್ನು ಕೇಂದ್ರಸರ್ಕಾರದ ನೂತನ ಯೋಜನೆಯು ನೀಡಿದ್ದು, ಈ ನಿಟ್ಟಿನಲ್ಲಿ ವಿಶೇಷ ನ್ಯಾಯಾಲಯಗಳ ಸ್ಥಾಪನೆಯ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT