ಸೋಮವಾರ, ಮಾರ್ಚ್ 1, 2021
29 °C

ಉತ್ತರ ಪ್ರದೇಶ:‘ಹನುಮ ದಲಿತ’ ಯೋಗಿ ಆದಿತ್ಯನಾಥ ಹೇಳಿಕೆಗೆ ಸಚಿವ ಓಂ ಪ್ರಕಾಶ್ ವಿರೋಧ

ಪಿಟಿಐ Updated:

ಅಕ್ಷರ ಗಾತ್ರ : | |

ಮುಜಾಫರ್‌ನಗರ: ‘ಹನುಮ ದಲಿತ’ ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆ ಸಚಿವ ಓಂ ಪ್ರಕಾಶ್ ರಾಜ್‌ಭರ್ ವಿರೋಧ ವ್ಯಕ್ತಪಡಿಸಿದ್ದಾರೆ. 

ಶಾಮ್ಲಿ ಜಿಲ್ಲೆಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ದೇವರನ್ನು ಜಾತಿ ಹೆಸರಿನಲ್ಲಿ ವಿಂಗಡಿಸುವುದು ಸರಿಯಲ್ಲ. ಈ ವಿವಾದಾತ್ಮಕ ಹೇಳಿಕೆಯಿಂದಾಗಿ ದಲಿತ ಸಮುದಾಯದವರು ಹನುಮ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳಲು ಒತ್ತಾಯಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ. 

‘ದೇಶದ ಎಲ್ಲ ಹನುಮ ದೇವಸ್ಥಾನಗಳನ್ನು ದಲಿತರು ಸುಪರ್ದಿಗೆ ತೆಗೆದುಕೊಳ್ಳಬೇಕು. ಮತ್ತು ಅಲ್ಲಿ ದಲಿತರನ್ನೇ ಪುರೋಹಿತರಾಗಿ ನೇಮಿಸಕೊಳ್ಳಬೇಕು ಎಂದು’ ಮುಖ್ಯಮಂತ್ರಿ ಹೇಳಿಕೆಗೆ ಭೀಮ್‌ ಆರ್ಮಿ ಸಂಘಟನೆ ಮುಖ್ಯಸ್ಥ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ.  

ರಾಜಸ್ಥಾನದ ಅಲ್ವರ್‌ನಲ್ಲಿ ನಡೆದ ರ‍್ಯಾಲಿ ಸಂದರ್ಭದಲ್ಲಿ‌ ‘ಹನುಮಂತ ವಂಚಿತ, ದಲಿತ ಮತ್ತು ಅರಣ್ಯವಾಸಿ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಈ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಬಿಜೆಪಿ ಮುಖಂಡರಿಂದಲೇ ಪ್ರತಿರೋಧ ವ್ಯಕ್ತವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು